ನ್ಯೂಯಾರ್ಕ್: ಮಂಗಳವಾರ ನಗರದ ಬ್ರೂಕ್ಲಿನ್ ರೈಲು ನಿಲ್ದಾಣದಲ್ಲಿ ಅಪರಿಚಿತ ದುಷ್ಕರ್ಮಿ ಜನರು ಕಚೇರಿಗೆ ತೆರಳುವ ಸಂದರ್ಭದಲ್ಲಿ ನಡೆದ ಗುಂಡು ಹಾರಾಟ ಪ್ರಕರಣದಲ್ಲಿ ಕನಿಷ್ಠ 16 ಮಂದಿ ಗಾಯಗೊಂಡಿದ್ದಾರೆ.
ಸ್ಥಳೀಯ ಕಾಲಮಾನ ಬೆಳಗ್ಗೆ 8.30ರ ಸುಮಾರಿಗೆ ಬ್ರೂಕ್ಲಿನ್ನ ಸನ್ಸೆಟ್ ಪಾರ್ಕ್ನ ಸುತ್ತಮುತ್ತ ಗುಂಡು ಹಾರಾಟ ನಡೆಯಿತು. ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ರೈಲು ನಿಲ್ದಾಣದ ಪ್ಲಾಟ್ಫಾರಂನಲ್ಲಿ ಜನರು ಗಾಬರಿಯಿಂದ ಓಡುತ್ತಿದ್ದು, ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹಲವರು ಗಾಯಗೊಂಡಿದ್ದರು.
ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನ್ಯೂಯಾರ್ಕ್ ಪೊಲೀಸರು ಸ್ಥಳದಿಂದ ಸ್ಫೋಟಕಗಳನ್ನು ವಶಪಡಿಸಿಕೊಂಡು ನಿಷ್ಕ್ರಿಯಗೊಳಿಸಿದ್ದಾರೆ. ಘಟನೆಯ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ಗೂ ಮಾಹಿತಿ ನೀಡಲಾಗಿದೆ. ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ನ ಎಲ್ಲ ರೈಲು ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.