ಇಸ್ಲಾಮಾಬಾದ್: ಮಾಜಿ ಪ್ರಧಾನಿ ಮತ್ತು ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಗುರುವಾರ ನಸುಕಿನಲ್ಲಿ ಇಸ್ಲಾಮಾಬಾದ್ಗೆ ತಲುಪಲು ಮುಂದಾದಾಗ ಪಾಕಿಸ್ತಾನದಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಈ ವೇಳೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿಗರೊಂದಿಗೆ ಘರ್ಷಣೆ ನಡೆಸಿದರು.
ಪಾಕಿಸ್ತಾನದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ವಿಸರ್ಜಿಸಿ ಹೊಸ ಚುನಾಣೆ ಘೋಷಿಸುವವರೆಗೆ ಪ್ರದೇಶವನ್ನು ಖಾಲಿ ಮಾಡುವುದಿಲ್ಲ ಎಂದು ಇಮ್ರಾನ್ ಖಾನ್ ತನ್ನ ಬೆಂಬಲಿಗರಿಗೆ ಎಚ್ಚರಿಕೆ ನೀಡಿದ ರು. ಈ ವೇಳೆ ಫೆಡರಲ್ ರಾಜಧಾನಿಯ ಡಿ-ಚೌಕ್ಗೆ ತೆರಳದಂತೆ ಅಧಿಕಾರಿಗಳು ಅವರನ್ನು ತಡೆಯಲು ಪ್ರಯತ್ನಿಸಿದ ನಂತರ ಪೊಲೀಸರು ಮತ್ತು ಪಿಟಿಐ ಕಾರ್ಯಕರ್ತರು ಘರ್ಷಣೆ ಮಾಡಿದ್ದರಿಂದ ದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.
ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರವಾಯು ಪ್ರಯೋಗಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಇದರಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಎಂದು ಆಂತರಿಕ ಸಚಿವಾಲಯದ ಅಧಿಕಾರಿ ಹೇಳಿದ್ದಾರೆ.
ಇಸ್ಲಾಮಾಬಾದ್ನಲ್ಲಿ ಪಿಟಿಐ ಮೆರವಣಿಗೆಯನ್ನು ನಿಷೇಧಿಸುವ ಸರ್ಕಾರದ ನಿರ್ಧಾರದ ನಂತರ ದೇಶವು ರಾಜಕೀಯ ಮುಖಾಮುಖಿಯತ್ತ ಸಾಗುತ್ತಿರುವಂತೆ ತೋರುತ್ತಿದೆ ಎಂದು ಪಾಕಿಸ್ತಾನದ ಪತ್ರಕರ್ತರೊಬ್ಬರು ‘ಇಮ್ರಾನ್ ಖಾನ್ ಅವರ ಅವ್ಯವಸ್ಥೆಯ ಹಾದಿ’ ಎಂಬ ಶೀರ್ಷಿಕೆಯ ಅಭಿಪ್ರಾಯದಲ್ಲಿ ಹೇಳಿದ್ದಾರೆ.