ವಿದೇಶ

ಪಾಕ್ ನ ಭದ್ರತೆಯ ಬಗ್ಗೆ ವಿಶ್ವಾಸವಿಲ್ಲ : ಚೀನಾ ಸಂಸದ

ಇಸ್ಲಾಮಾಬಾದ್‌: ಕಳೆದ ತಿಂಗಳು ಕರಾಚಿ ವಿಶ್ವವಿದ್ಯಾಲಯದ ಮೇಲೆ ನಡೆದ ದಾಳಿಯ ನಂತರ ತನ್ನ ನಾಗರಿಕರನ್ನು ಸಂರಕ್ಷಿಸುವ ಪಾಕಿಸ್ತಾನದ ಭದ್ರತಾ ವ್ಯವಸ್ಥೆಯ ಸಾಮರ್ಥ್ಯದ ಬಗ್ಗೆ ಚೀನಾ ವಿಶ್ವಾಸ ಕಳೆದುಕೊಂಡಿದೆ ಎಂದು ಹಿರಿಯ ಸಂಸದ ಮುಶಾಹಿದ್‌ ಹುಸೇನ್‌ ಹೇಳಿದರು.

ಈಚೆಗೆ ಕರಾಚಿಯ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ಆತ್ಮಾಹುತಿ ದಾಳಿಕೋರರೊಬ್ಬರು ವಾಹನವನ್ನು ಸ್ಫೋಟಿಸಿದಾಗ ಚೀನಾದ ಮೂವರು ಶಿಕ್ಷಕರು ಸಾವನ್ನಪ್ಪಿದ್ದರು. ಇದು ಪಾಕಿಸ್ತಾನದಲ್ಲಿನ ಚೀನಾ ನಾಗರಿಕರನ್ನು ಗುರಿಯಾಗಿಸಿ ನಡೆದ ಇತ್ತೀಚಿನ ದಾಳಿಯಾಗಿದೆ.

ಕರಾಚಿ ವಿಶ್ವವಿದ್ಯಾಲಯದ ಮೇಲಿನ ದಾಳಿಯು ವರ್ಷದಲ್ಲಿ ಪಾಕಿಸ್ತಾನದಲ್ಲಿ ಚೀನಾ ನಾಗರಿಕರನ್ನು ಗುರಿಯಾಗಿಸಿ ನಡೆಸಿದ ಮೂರನೇ ದಾಳಿಯಾಗಿದೆ.

ದಾಳಿಯ ನಂತರ ಚೀನಾ ಹೊಂದಿರುವ ಮನೋಭಾವದ ಬಗ್ಗೆ ಸಂಸತ್ತಿನ ರಕ್ಷಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಶಾಹಿದ್‌ ಶುಕ್ರವಾರ ಡಾನ್‌ ಪತ್ರಿಕೆಗೆ ಪ್ರತಿಕ್ರಿಯಿಸಿದರು.

‘ಇದು ಚೀನಾದಲ್ಲಿ ಗಂಭೀರವಾದ ಕಳವಳಕ್ಕೆ ಕಾರಣವಾಗಿದ್ದು ಒಂದು ರೀತಿಯ ಆಕ್ರೋಶವನ್ನುಂಟು ಮಾಡಿದೆ’ ಎಂದು ಹೇಳಿದರು.

‘ದಾಳಿಗಳು ಒಂದೇ ಮಾದರಿಯಲ್ಲಿ ನಡೆದಿವೆ. ಇದನ್ನು ತಡೆಯಲು ಪಾಕಿಸ್ತಾನ ವಿಫಲವಾಗಿದೆ. ಅದರ ಭದ್ರತೆಯ ಭರವಸೆ ಕೇವಲ ಪದಗಳಿಗೆ ಸೀಮಿತವಾಗಿವೆ ಎಂಬುದು ಸ್ಪಷ್ಟವಾಗಿದೆ. ಭದ್ರತಾ ವ್ಯವಸ್ಥೆಗಳು ನಿದ್ರೆಗೆ ಜಾರಿದಂತಿವೆ’ ಎಂದು ಟೀಕಿಸಿದರು.

‘ಇಂತಹ ದಾಳಿಗಳು ಮುಂದುವರಿದರೆ ಚೀನಾ ಮಾತ್ರವಲ್ಲ ಇತರ ದೇಶಗಳ ಹೂಡಿಕೆದಾರರೂ ಪಾಕಿಸ್ತಾನದಲ್ಲಿ ಯೋಜನೆ ಆರಂಭಿಸಲು ಹಿಂಜರಿಯುತ್ತಾರೆ’ ಎಂದು ಹೇಳಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago