Categories: ವಿದೇಶ

ಪುರುಷರು ಮಹಿಳೆಯರು ಒಟ್ಟಿಗೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುವಂತಿಲ್ಲ : ತಾಲಿಬಾನ್

ಕಾಬೂಲ್ ‌: ಪಶ್ಚಿಮ ಆಫ್ಘಾನಿಸ್ತಾನದ ಹೆರಾತ್‌ ನಗರದಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತು ಊಟ ಮಾಡುವುದು ಹಾಗೂ ಉದ್ಯಾನಗಳಿಗೆ ಭೇಟಿ ನೀಡುವುದನ್ನು ತಾಲಿಬಾನ್‌ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಫ್ಘಾನಿಸ್ತಾನವು ಸಂಪ್ರದಾಯವಾದಿ ಮತ್ತು ಪಿತೃಪ್ರಭುತ್ವದ ರಾಷ್ಟ್ರವಾಗಿದೆ. ಆದರೆ ರೆಸ್ಟೋರೆಂಟ್‌ಗಳಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತು ಊಟ ಮಾಡುವುದನ್ನು ಸಾಮಾನ್ಯ ಎನ್ನುವಂತಾಗಿದೆ. ಮುಖ್ಯವಾಗಿ ಆಫ್ಘಾನ್‌ ಮಾನದಂಡಗಳನ್ನು ಮೀರಿ ಉದಾರವಾದಿ ನಗರ ಎನಿಸಿರುವ ಹೆರಾತ್‌ನಲ್ಲಿ ಇಂತಹ ದೃಶ್ಯಗಳು ಸಾಮಾನ್ಯವಾಗಿದೆ. ಇಲ್ಲೂ ಸಹ ತಾಲಿಬಾನ್‌ ಕಠಿಣ ನಿಯಮಗಳನ್ನು ವಿಧಿಸಿದೆ.

ಆಗಸ್ಟ್‌ನಲ್ಲಿ ಆಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಮರಳಿದ ನಂತರ ತಾಲಿಬಾನ್‌, ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸುವ ನಿರ್ಬಂಧಗಳನ್ನು ವಿಧಿಸುತ್ತಿದೆ. ಹೆರಾತ್‌ನಲ್ಲಿ ಸದ್ಗುಣ ಪ್ರಚಾರ ಮತ್ತು ದುರಾಚಾರ ತಡೆಗಟ್ಟುವಿಕೆ ಸಚಿವಾಲಯದ ತಾಲಿಬಾನ್ ಅಧಿಕಾರಿ ರಿಯಾಜುಲ್ಲಾ ಸೀರತ್, ರೆಸ್ಟೋರೆಂಟ್‌ಗಳಲ್ಲಿ ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ನಿಯಮ ಕೇವಲ ಪುರುಷ ಮತ್ತು ಮಹಿಳೆಯರಿಗಷ್ಟೇ ಅಲ್ಲ, ಗಂಡ-ಹೆಂಡತಿಗೂ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಹೆರಾತ್ ರೆಸ್ಟೋರೆಂಟ್‌ನಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ನನಗೆ ಮತ್ತು ನನ್ನ ಪತಿಗೆ ಮ್ಯಾನೇಜರ್‌ ಹೇಳಿದ್ದರು ಎಂದು ಹೆಸರು ಹೇಳಲಿಚ್ಛಿಸದ ಮಹಿಳೆಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ರೆಸ್ಟೋರೆಂಟ್‌ ಮಾಲೀಕ ಸಫೀವುಲ್ಲಾ ಅವರು ತಾಲಿಬಾನ್‌ ಕಠಿಣ ನಿಯಮ ವಿಧಿಸಿರುವುದನ್ನು ಖಚಿತಪಡಿಸಿದ್ದಾರೆ. ನಾವು ಆದೇಶವನ್ನು ಅನುಸರಿಸಬೇಕು. ಆದರೆ ಇದು ನಮ್ಮ ವ್ಯವಹಾರದ ಮೇಲೆ ಬಹಳ ಋಣಾತ್ಮಕ ಪರಿಣಾಮ ಬೀರುತ್ತದೆ ಎಂದು ಸಫೀವುಲ್ಲಾ ತಿಳಿಸಿದ್ದಾರೆ.

Ashika S

Recent Posts

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

11 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

14 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

36 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

52 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 hour ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

2 hours ago