ಲಂಡನ್ : ಬ್ರಿಟನ್ನಲ್ಲಿ ಹಿಂದೆಂದೂ ಕಂಡುಕೇಳರಿಯದ ತೈಲ ಬಿಕ್ಕಟ್ಟೊಂದು ಸೃಷ್ಟಿಯಾಗಿದೆ. ಅಗತ್ಯ ಪ್ರಮಾಣದ ತೈಲ ಸಂಗ್ರಹ ಇದ್ದಾಗಿಯೂ ಜನರು ಆತಂಕಕ್ಕೆ ಒಳಗಾಗಿ ಪೆಟ್ರೋಲ್ ಪಂಪ್ ಎದುರು ಕಿಲೋಮೀಟರ್ಗಟ್ಟಲೆ ಸರತಿ ಸಾಲುಗಳಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹಾಗಂತ ಈ ಬಿಕ್ಕಟ್ಟಿಗೆ ಕಾರಣ ಪೆಟ್ರೋಲ್, ಡೀಸೆಲ್ ಕೊರತೆ ಅಲ್ಲ, ಟ್ರಕ್ ಚಾಲಕರ ಕೊರತೆ. ಪೆಟ್ರೋಲ್ ಪಂಪ್ಗಳಿಗೆ ತೈಲವನ್ನು ಕೊಂಡೊಯ್ಯಲು ಟ್ರಕ್ ಚಾಲಕರೇ ಸಿಗುತ್ತಿಲ್ಲ. ಹೀಗಾಗಿ ದೇಶದ ಪ್ರಮುಖ ನಗರಗಳ ಶೇ.90ರಷ್ಟುಪೆಟ್ರೋಲ್ ಪಂಪ್ಗಳು ಖಾಲಿಯಾಗಿವೆ. ಈ ಸುದ್ದಿ ತಿಳಿದ ಜನರು ಗಾಬರಿಗೊಳಗಾಗಿ ಇನ್ನುಳಿದ ಪಂಪ್ಗಳಿಗೆ ಮತ್ತಿಗೆ ಹಾಕುತ್ತಿದ್ದಾರೆ.