News Karnataka Kannada
Saturday, May 04 2024
ವಿದೇಶ

ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನರೇಂದ್ರ ಮೋದಿ

Narendramodi Padmaaward 11072021
Photo Credit :

ವ್ಯಾಟಿಕನ್ ಸಿಟಿ : ಜಿ20 ಶೃಂಗಸಭೆ ಪ್ರಯುಕ್ತ ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್‌ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕ್ಯಾಥೋಲಿಕ್‌ ಚರ್ಚ್‌ನ ಮುಖ್ಯಸ್ಥರಾಗಿರುವ ಪೋಪ್‌ ಫ್ರಾನ್ಸಿಸ್‌ ಅವರನ್ನು ಪ್ರಧಾನಿ ಮೋದಿ ಅವರು ಭೇಟಿಯಾಗಿದ್ದು ಇದೇ ಮೊದಲು. 2013ರಲ್ಲಿ ಫ್ರಾನ್ಸಿಸ್‌ ಅವರು ಪೋಪ್‌ ಆದ ಬಳಿಕ ಅವರನ್ನು ಭೇಟಿಯಾದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಕೋವಿಡ್‌-19 ಸೇರಿದಂತೆ ಜಗತ್ತಿನ ಇತರ ವಿಚಾರಗಳ ಬಗ್ಗೆ ಈ ವೇಳೆ ಮಾತುಕತೆ ನಡೆದಿದೆ. ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿ ಕಾಯ್ದುಕೊಳ್ಳುವುದೂ ಸೇರಿದಂತೆ ಹಲವು ಆಸಕ್ತಿಯ ಕ್ಷೇತ್ರಗಳ ಕುರಿತು ಚರ್ಚೆ ನಡೆದಿದೆ. ವ್ಯಾಟಿಕನ್‌ನಲ್ಲಿ ಮೋದಿ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು