Categories: ವಿದೇಶ

ಪ್ರಧಾನಿ ಸ್ಥಾನದ ಪದಚ್ಯುತಿಗೆ ಒಪ್ಪಿದ ಗೋಟಬಯ ರಾಜಪಕ್ಸ

ಕೊಲಂಬೊ: ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜನಾಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಸ್ಥಾನದಿಂದ ತನ್ನ ಅಣ್ಣ ಮಹಿಂದಾ ರಾಜಪಕ್ಸ ಅವರ ಪದಚ್ಯುತಿಗೆ ಒಪ್ಪಿದ್ದಾರೆ.

ಪ್ರಧಾನಿ ಸ್ಥಾನಕ್ಕೆ ಹೊಸ ಅಭ್ಯರ್ಥಿ ಹಾಗೂ ಸರ್ವಪಕ್ಷಗಳ ಸದಸ್ಯರನ್ನು ಒಳಗೊಂಡ ಹೊಸ ಸಂಪುಟದ ಆಯ್ಕೆಗಾಗಿ ರಾಷ್ಟ್ರೀಯ ಸಮಿತಿಯನ್ನು ರಚಿಸಲೂ ತೀರ್ಮಾನಿಸಿದ್ದಾರೆ.

ಅಧ್ಯಕ್ಷರ ಜೊತೆಗಿನ ಸಭೆಯ ನಂತರ ಸಂಸದ ಮೈತ್ರಿಪಾಲ ಸಿರಿಸೇನಾ ಅವರು ಈ ವಿಷಯ ತಿಳಿಸಿದರು. ಸಿರಿಸೇನಾ ಅವರು ರಾಜಪಕ್ಸಗೂ ಮೊದಲು ಶ್ರೀಲಂಕಾದ ಅಧ್ಯಕ್ಷರಾಗಿದ್ದರು.

ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾದ ಸರ್ಕಾರ, ಬಾಕಿ ಇರುವ ವಿದೇಶಿ ಸಾಲ ಪಾವತಿಸದೇ ಅಮಾನತ್ತಿನಲ್ಲಿಡಲು ನಿರ್ಧರಿಸಿದೆ. ವಿದೇಶಿ ಸಾಲದ ಮೊತ್ತ ಹೆಚ್ಚಿರುವುದು ಆಮದು ವಹಿವಾಟಿನ ಮೇಲೂ ಪರಿಣಾಮ ಬೀರಿದ್ದು, ಜನತೆ ಆಹಾರ ಪದಾರ್ಥಗಳು, ಇಂಧನ, ಅಡುಗೆ ಅನಿಲ, ಔಷಧಗಳಿಗೆ ಸಾಲಿನಲ್ಲಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.

ಅಧ್ಯಕ್ಷ ಗೋಟಬಯ, ಪ್ರಧಾನಿ ಮಹಿಂದಾ ಒಳಗೊಂಡಂತೆ ರಾಜಪಕ್ಸ ಕುಟುಂಬವು ಶ್ರೀಲಂಕಾದ ರಾಜಕಾರಣದಲ್ಲಿ ಕಳೆದ 20 ವರ್ಷಗಳಿಂದ ಪ್ರಾಬಲ್ಯ ಹೊಂದಿದೆ. ಈ ಕುಟುಂಬದ ವಿರುದ್ಧ ಈಗ ಜನಾಕ್ರೋಶ ವ್ಯಕ್ತವಾಗಿದೆ. ಅಧ್ಯಕ್ಷ ಮತ್ತು ಪ್ರಧಾನಿ ನಿವಾಸದ ಎದುರು ಹಲವು ದಿನಗಳಿಂದ ಜನರು ಭಾರಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

Ashika S

Recent Posts

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

6 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

25 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

27 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

42 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

57 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago