Categories: ವಿದೇಶ

ಫಿಲಿಪೈನ್ಸ್‌ ನಲ್ಲಿ ಅಪ್ಪಳಿಸಿದ ರೈ ಚಂಡಮಾರುತ: ಸಾವಿನ ಸಂಖ್ಯೆ 75ಕ್ಕೆ ಏರಿಕೆ

ಫಿಲಿಪೈನ್ಸ್‌ ನಲ್ಲಿ ಅಪ್ಪಳಿಸಿದ ರೈ ಚಂಡಮಾರುತದ ಪರಿಣಾಮ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ರೈ ಚಂಡಮಾರುತದಿಂದ ತೀವ್ರ ತೊಂದರೆ ಅನುಭವಿಸಿದ ಪ್ರದೇಶಗಳು ಜಲಾವೃತಗೊಂಡಿವೆ. ಈ ಪೈಕಿ 3 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನ ಕಳೆದುಕೊಂಡಿದ್ದಾರೆ.

ಈವರೆಗೆ ಫಿಲಿಪೈನ್ಸ್‌ ನಲ್ಲಿ 75 ಮಂದಿ ಮೃತಪಟ್ಟಿದ್ದು, 13 ಜನ ಗಾಯಗೊಂಡಿದ್ದಾರೆ ಮತ್ತು 10 ಮಂದಿ ಕಾಣೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ 3 ದಿನಗಳಿಂದ ಫಿಲಿಪೈನ್ಸ್‌ ನಲ್ಲಿ ಟೈಫನ್‌ ರೈ ಚಂಡಮಾರುತ ಆರಂಭವಾಗಿದ್ದು, ಗಂಟೆಗೆ 195 ಕಿ.ಮೀ ವೇಗದಲ್ಲಿ ಗಾಳಿ ಚಲಿಸಿದೆ.

ನಗರದ ದಕ್ಷಿಣ ಮತ್ತು ಮಧ್ಯದ್ವೀಪ ಪ್ರಾಂತ್ಯಗಳಲ್ಲಿ  ವಿದ್ಯುತ್, ದೂರವಾಣಿ ಸೇವೆ ಅಸ್ತವ್ಯಸ್ತಗೊಂಡಿದೆ.  ಆಹಾರ, ನೀರು, ತಾತ್ಕಾಲಿಕ ನಿವಾಸ, ಇಂಧನ, ನೈರ್ಮಲ್ಯ ಕಿಟ್‌ಗಳು ಮತ್ತು ಔಷಧಿಗಳನ್ನು ಪೂರೈಸಲು 18 ಸಾವಿರಕ್ಕೂ ಹೆಚ್ಚಿನ ರಕ್ಷಣಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

Sneha Gowda

Recent Posts

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

9 mins ago

ಈ ವಾರವೂ ಅನಿಶ್ಚಿತ ಸ್ಥಿತಿಯಲ್ಲಿ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…

27 mins ago

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

44 mins ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

8 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

8 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

9 hours ago