ಫಿಲಿಪೈನ್ಸ್ ನಲ್ಲಿ ಪ್ರಬಲ ‘ರೈ’ ಚಂಡಮಾರುತ ಅಪ್ಪಳಿಸಿದ್ದು, ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ. ಭಾರೀ ಗಾಳಿಯಿಂದ ಮನೆಯ ಚಾವಣಿಗಳು ಹಾರಿದ್ದು, ಕೆಲವೆಡೆ ಮರಗಳು ಬಿದ್ದಿವೆ. ಪ್ರವಾಹದಲ್ಲಿ ಗ್ರಾಮಗಳು ಮುಳುಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಂಡಮಾರುತ ಅಪ್ಪಳಿಸುವ ಮುನ್ನವೇ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.
ದಕ್ಷಿಣ ಮತ್ತು ಮಧ್ಯದ್ವೀಪ ಪ್ರಾಂತ್ಯಗಳಲ್ಲಿ ವಿದ್ಯುತ್ ಕಡಿತಗೊಂಡಿದ್ದು, ಮೊಬೈಲ್ ನೆಟ್ವರ್ಕ್ ಇಲ್ಲದೆ ಜನ ಸಂಪರ್ಕ ಕಳೆದುಕೊಂಡಿದ್ದಾರೆ.
ಕಳೆದ ದಶಕಗಳಲ್ಲಿ ಫಿಲಿಪೈನ್ಸ್ ಗೆ ಅಪ್ಪಳಿಸಿದ ಅತ್ಯಂತ ಶಕ್ತಿಶಾಲಿ ಚಂಡಮಾರುತ ಇದಾಗಿದೆ. 18 ಸಾವಿರಕ್ಕೂ ಹೆಚ್ಚು ಮಿಲಿಟರಿ, ಪೊಲೀಸ್, ಕೋಸ್ಟ್ ಗಾರ್ಡ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಚಂಡಮಾರುತದಿಂದ ಹಾನಿಯಾದ ಪ್ರದೇಶಗಳಿಗೆ ತಲುಪಿದ್ದಾರೆ.