ಬಾಂಗ್ಲಾ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಹಿಂಸಾಚಾರ ಮುಂದುವರಿದಿದ್ದು, ಹಿಂದೂಗಳ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ.
ಗುಂಪೊಂದು ಹಿಂದೂಗಳಿಗೆ ಸೇರಿದ 66 ಮನೆಗಳನ್ನು ಧ್ವಂಸ ಮಾಡಿದ್ದು, ಕನಿಷ್ಠ 20 ಮನೆಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವಾರವಷ್ಟೇ ಗುಂಪೊಂದು ದುರ್ಗಾ ಪೂಜೆ ಪೆಂಡಾಲ್ಗಳ ಮೇಲೆ ದಾಳಿ ನಡೆಸಿತ್ತು. ಅಲ್ಲದೇ ದೇವಸ್ಥಾನವನ್ನೂ ಧ್ವಂಸ ಮಾಡಿತ್ತು. ಇದನ್ನು ಖಂಡಿಸಿ ಹಿಂದೂಗಳು ಪ್ರತಿಭಟಿಸಿದ್ದರು.
ಇದರ ಬೆನ್ನಲ್ಲೇ ಮತ್ತೊಂದು ದುಷ್ಕೃತ್ಯ ನಡೆದಿದ್ದು, ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.
ರಂಗಪುರ ಜಿಲ್ಲೆಯ ಗ್ರಾಮವೊಂದಕ್ಕೆ 100 ಜನಕ್ಕೂ ಹೆಚ್ಚು ಮಂದಿ ಗುಂಪೊಂದು ಬಂದಿದ್ದು, ಏಕಾಏಕಿ ಮನೆಗಳಿಗೆ ಬೆಂಕಿ ಇಟ್ಟಿದೆ. 66 ಮನೆಗಳನ್ನು ಧ್ವಂಸ ಮಾಡಿದೆ.
ತದನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದು, ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ, ಇದಕ್ಕೆ ಸಂಬಂಧಿಸಿದಂತೆ 52 ಶಂಕಿತರನ್ನು ಬಂಧಿಸಲಾಗಿದೆ ಎಂದು ಎಎಸ್ಪಿ ಮೊಹಮ್ಮದ್ ಕಮ್ರುಜ್ಜಮಾನ್ ತಿಳಿಸಿದ್ದಾರೆ.