News Karnataka Kannada
Tuesday, May 07 2024
ವಿದೇಶ

ಬ್ರಿಟನ್‌:ಒಂದೇ ದಿನ 10 ಸಾವಿರ ಗಡಿ ದಾಟಿದ ಓಮೈಕ್ರಾನ್ ಪ್ರಕರಣ

Covid Corona
Photo Credit :

ಲಂಡನ್: ಬ್ರಿಟನ್‌ನಲ್ಲಿ ಶನಿವಾರದಂದು ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ ಸೋಂಕಿನ 10,059 ಹೊಸ ಪ್ರಕರಣಗಳು ಪತ್ತೆಯಾಗಿವೆ.ಹೊಸ ಓಮೈಕ್ರಾನ್ ಸೋಂಕಿನಿಂದಾಗಿ ಇದುವರೆಗೆ ಏಳು ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 24,968 ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.

ಈ ಕುರಿತು ಬ್ರಿಟನ್‌ ಹೆಲ್ತ್ ಸೆಕ್ಯುರಿಟಿ ಏಜೆನ್ಸಿ (ಯುಕೆಎಚ್‌ಎಸ್‌ಎ) ಮಾಹಿತಿ ನೀಡಿದ್ದು, ಶುಕ್ರವಾರಕ್ಕಿಂತ ಮೂರು ಪಟ್ಟು ಹೆಚ್ಚು ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ.

24 ಗಂಟೆ ಅವಧಿಯಲ್ಲಿ 90,418 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಎರಡನೇ ದಿನವೂ 90 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 11,279,428ಕ್ಕೆ ಏರಿಕೆಯಾಗಿದೆ.

ಕೋವಿಡ್‌ನಿಂದಾಗಿ ಒಂದೇ ದಿನ 125 ಮಂದಿ ಸಾವಿಗೀಡಾಗಿದ್ದಾರೆ. ಈಗ ಒಟ್ಟು ಸಾವಿನ ಸಂಖ್ಯೆ 1,47,173ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು