Categories: ವಿದೇಶ

ಬ್ರೆಜಿಲ್‍ನ ಬಹಿಯಾ ರಾಜ್ಯದಲ್ಲಿ ಭಾರೀ ಮಳೆ-ಪ್ರವಾಹಕ್ಕೆ 21 ಸಾವು

ಬ್ರೆಸಿಲಿಯಾ: ಈಶಾನ್ಯ ಬ್ರೆಜಿಲ್‍ನ ಬಹಿಯಾ ರಾಜ್ಯದ  ಒಟ್ಟು 116 ನಗರಗಳಲ್ಲಿ ನವೆಂಬರ್ ಅಂತ್ಯದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ತುರ್ತುಸ್ಥಿತಿ ತಲೆದೋರಿದೆ.21 ಮಂದಿ ಅಸುನೀಗಿ 358 ಮಂದಿ ಗಾಯಗೊಂಡಿದ್ದಾರೆ.

ರಾಜ್ಯ ಸರ್ಕಾರದ ಅಧಿಕೃತ ಅಂಕಿ-ಅಂಶದ ಪ್ರಕಾರ, ಪ್ರವಾಹದಿಂದಾಗಿ 34,163 ಜನರು ನಿರ್ವಸತಿಗರಾಗಿದ್ದಾರೆ ಮತ್ತು ಬಹುತೇಕ 43,000 ಜನರನ್ನು ಸ್ಥಳಾಂತರಗೊಳಿಸಲಾಗಿದೆ.

ಬ್ರೆಜಿಲ್‍ನ ಇತರ ನಾಲ್ಕು ಉತ್ತರ ಮತ್ತು ಆಗ್ನೇಯ ರಾಜ್ಯಗಳಲ್ಲಿ ಸಹ ಇತ್ತೀಚಿನ ದಿನಗಳಲ್ಲಿ ಪ್ರವಾಹ ಉಂಟಾಗಿದೆ. ಬಹಿಯಾದಲ್ಲಿ ಪ್ರವಾಹದಿಂದ 4,70,000 ಜನರು ಸಂಕಷ್ಟಪೀಡಿತರಾಗಿದ್ದಾರೆ.

50 ನಗರಗಳಲ್ಲಿ ಮನೆಗಳು ಹಾಗೂ ಅಂಗಡಿಗಳಿಗೆ ನೀರು ನುಗ್ಗಿ ಜನರು ತಮ್ಮ ವಸ್ತುಗಳನ್ನು ತೊರೆದು ಸುರಕ್ಷಿತ ಸ್ಥಳಗಳತ್ತ ದಾವಿಸುವಂತೆ ಮಾಡಿದೆ.

ಇದು ಕಳೆದ 32 ವರ್ಷಗಳಲ್ಲಿ ಬ್ರೆಜಿಲ್‍ನ ಬಹಿಯಾದಲ್ಲಿ ಅತಿ ಹೆಚ್ಚು ಮಳೆ ಸುರಿದ ಅವಯಾಗಿದೆ. ಈ ವರ್ಷ ಇಲ್ಲಿ ವಾಡಿಕೆಗಿಂತ ಐದು ಪಟ್ಟು ಅಧಿಕ ಮಳೆಯಾಗಿದೆ ಎಂದು ತಿಳಿದುಬಂದಿದೆ.

Swathi MG

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

19 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

41 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

47 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago