News Karnataka Kannada
Monday, April 29 2024
ವಿದೇಶ

ಬ್ರೆಜಿಲ್‌ ನಲ್ಲಿ ಭಾರೀ ಭೂಕುಸಿತ, 78 ಜನರ ಸಾವು

Brezil
Photo Credit :

ಬ್ರೆಜಿಲ್‌ ನಲ್ಲಿನ ಪೆಟ್ರೋಪೊಲೀಸ್‌ ನಲುಂಟಾದಲ್ಲಿ ಸಂಭವಿಸಿದ ಭಾರೀ ಪ್ರವಾಹಕ್ಕೆ ಕನಿಷ್ಠ 78 ಮಂದಿ ಮೃತಪಟ್ಟಿದ್ದಾರೆ. ಸತತ ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಲವೆಡೆ ಭೂಕುಸಿತವಾಗಿದ್ದು, ಬೀದಿಗಳು ನೀರಿನಿಂದ ತುಂಬಿದ್ದು, ಮನೆಗಳು ಕೊಚ್ಚಿ ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯಿಂದಾಗಿ ಕಟ್ಟಡ ಅವಶೇಷಗಳ ಅಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಕನಿಷ್ಠ 21 ಮಂದಿಯನ್ನು ರಕ್ಷಿಸಲಾಗಿದ್ದು, 78 ಮಂದಿಯ ಮೃತ ದೇಹ ಹೊರತೆಗೆಯಲಾಗಿದೆ.

ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 300 ಜನರನ್ನು ನಿರಾಶ್ರಿತರ ಶಿಬಿರದಲ್ಲಿ ಇರಿಸಲಾಗಿದೆ, ಹೆಚ್ಚಾಗಿ ಶಾಲೆಗಳಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಬ್ರೆಜಿಲ್‌ ನಲ್ಲಿ ಸಂಭವಿಸುತ್ತಿರುವ ದುರಂತಗಳಲ್ಲಿ ಇದು ಕೂಡ ಒಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು