News Karnataka Kannada
Tuesday, April 30 2024
ವಿದೇಶ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ 9 ಮಂದಿ ಸಾವು

Untitled 178
Photo Credit :

ತಜಿಕಿಸ್ತಾನ್: ಅಫ್ಘಾನಿಸ್ತಾನ ಮತ್ತು ಚೀನಾದ ಗಡಿಯಲ್ಲಿರುವ ತಜಕಿಸ್ತಾನ್ ಪ್ರದೇಶದಲ್ಲಿ ಬುಧವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ತಾಜಿಕ್ ಅಧಿಕಾರಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ ಎಂದು ತಾಜಿಕ್ ಆಂತರಿಕ ಸಚಿವಾಲಯ ತಿಳಿಸಿದೆ.

ಸಚಿವಾಲಯದ ಪ್ರಕಾರ, ಕಾರ್ಯಾಚರಣೆಯ ಸಮಯದಲ್ಲಿ ಒಬ್ಬ ಅಧಿಕಾರಿ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದು, 13 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿಸಿದೆ.

ರಷ್ಯಾದ ಸೇನಾ ನೆಲೆಯನ್ನು ಹೊಂದಿರುವ ಬಡ ಮಾಜಿ ಸೋವಿಯತ್ ಗಣರಾಜ್ಯದಲ್ಲಿ ‘ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಯನ್ನು ಅಸ್ಥಿರಗೊಳಿಸಲು’ ತಜಕಿಸ್ತಾನ್ ಮತ್ತು ಚೀನಾವನ್ನು ಸಂಪರ್ಕಿಸುವ ರಸ್ತೆಯನ್ನು ‘ಸಂಘಟಿತ ಕ್ರಿಮಿನಲ್ ಗುಂಪಿನ’ ಸದಸ್ಯರು ನಿರ್ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷಾಂತ್ಯದಲ್ಲಿ ಪ್ರಾಂತೀಯ ರಾಜಧಾನಿ ಖೋರೋಗ್‌ನಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಗಳ ವರದಿಗಳ ನಂತರ ಈ ಕಾರ್ಯಾಚರಣೆಯು ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು