News Karnataka Kannada
Sunday, May 12 2024
ವಿದೇಶ

ಮಂಕಿಪಾಕ್ಸ್ ಭೀತಿ | ಹೊಸ ಮಾರ್ಗಸೂಚಿ ಬಳಸಿ: ಇಂಗ್ಲೆಂಡ್ ಆರೋಗ್ಯ ಇಲಾಖೆ ಸಲಹೆ

Monkey
Photo Credit :

ಇಂಗ್ಲೆಂಡ್: ಜನರ ನಡುವೆ ಮಂಕಿಪಾಕ್ಸ್ ಹರಡದಂತೆ ನಿಯಂತ್ರಿಸಲು ಸೋಂಕಿನ ಲಕ್ಷಣವಿರುವವರೊಂದಿಗೆ ಸೆಕ್ಸ್ ಹೊಂದುವುದನ್ನು ತಡೆಗಟ್ಟಬೇಕು ಎಂದು ಇಂಗ್ಲೆಂಡ್ ನಾದ್ಯಂತ ಆರೋಗ್ಯ ಪ್ರಾಧಿಕಾರಗಳು ಹೊಸ ಮಾರ್ಗಸೂಚಿ ಹೊರಡಿಸಿವೆ.

ಇಂಗ್ಲೆಂಡ್ ನಲ್ಲಿ 179ಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಸ್ಕಾಟ್ ಲ್ಯಾಂಡ್, ಉತ್ತರ ಐರ್ಲೆಂಡ್ ಮತ್ತು ವೆಲ್ಸ್ ಗಳ ಆರೋಗ್ಯ ಪ್ರಾಧಿಕಾರಗಳೊಂದಿಗೆ ಯುಕೆ ಆರೋಗ್ಯ ಸುರಕ್ಷತಾ ಏಜೆನ್ಸಿ ಈ ಹೊಸ ಆದೇಶ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಂಕಿಪಾಕ್ಸ್ ಸೋಂಕಿತರು ಇತರರೊಂದಿಗೆ ನಿಕಟ ಸಂಪರ್ಕ ಹೊಂದುವುದನ್ನು ಸಹ ನಿಲ್ಲಿಸುವಂತೆ ಸಲಹೆ ನೀಡಲಾಗಿದೆ.
ಮಂಕಿಪಾಕ್ಸ್ ಸಾಮಾನ್ಯವಾಗಿ ಜನರ ನಡುವೆ ಸುಲಭವಾಗಿ ಹರಡುವುದಿಲ್ಲ ಎಂಬುದರ ಬಗ್ಗೆ ಜನರಿಗೆ ಭರವಸೆ ನೀಡುತ್ತೇವೆ. ಒಟ್ಟಾರೇ ಸಾಮಾನ್ಯ ಜನರಿಗೆ ತೊಂದರೆ ಕಡಿಮೆಯಾಗಿದೆ ಎಂದು ವೆಲ್ಸ್ ನ ಹೆಲ್ತ್ ಪ್ರೊಟೆಕ್ಷನ್ ಫಾರ್ ಪಬ್ಲಿಕ್ ಹೆಲ್ತ್ ವಿಭಾಗದ ನಿರ್ದೇಶಕ ಅನಿವಾಸಿ ಭಾರತೀಯ ಡಾ. ಗಿರಿ ಶಂಕರ್ ಹೇಳಿದ್ದಾರೆ.

ಈ ಮಾರ್ಗಸೂಚಿ ಅಭಿವೃದ್ಧಿಗೆ ಸ್ಕಾಟ್ ಲ್ಯಾಂಡ್, ಉತ್ತರ ಐರ್ಲೆಂಡ್ ನ ಸಾರ್ವಜನಿಕ ಆರೋಗ್ಯ ಏಜೆನ್ಸಿ ಹಾಗೂ ಯುಕೆ ಹೆಲ್ತ್ ಸುರಕ್ಷತಾ ಏಜೆನ್ಸಿಯೊಂದಿಗೆ ಕಾರ್ಯೋನ್ಮುಖರಾಗಿರುವುದಾಗಿ ಅವರು ತಿಳಿಸಿದ್ದಾರೆ.

ಮಂಕಿಪಾಕ್ಸ್ ದೃಢಪಟ್ಟ ಜನರು 21 ದಿನಗಳ ಕಾಲ ಮನೆಯಲ್ಲಿಯೇ ಐಸೋಲೆಟೆಡ್ ಆಗಬೇಕು, ತಮ್ಮ ದೇಹದ ಯಾವುದೇ ಭಾಗದಲ್ಲಾದರೂ ಹೊಸ ಗಾಯ ಅಥವಾ ದದ್ದು, ಕಲೆಗಳು, ಕಾಣಿಸಿಕೊಂಡರೆ ಗಮನ ಹರಿಸುವಂತೆ ಸಲಹೆ ನೀಡಲಾಗಿದೆ.

ಸೆಕ್ಸ್ ಮೂಲಕವೂ ಮಂಕಿಪಾಕ್ಸ್ ಹರಡುವ ಬಗ್ಗೆ ಪುರಾವೆಗಳು ದೂರೆತಿರುವುದರಿಂದ ಅದಷ್ಟು ಅದನ್ನು ತಡೆಗಟ್ಟುವುದು ಒಳಿತು. ಇಲ್ಲವಾದರೆ ಮುಂಜಾಗ್ರತಾ ಕ್ರಮವಾಗಿ 8 ವಾರಗಳ ಕಾಲ ಕಾಂಡೋಮ್ ಬಳಸುವಂತೆ ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು