ವಿದೇಶ

ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧ: ಝೆಲೆನ್ಸ್ಕಿ

ಉಕ್ರೇನ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.

ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನ್ ನ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದ ಚೇತರಿಸಿಕೊಳ್ಳುವವರೆಗೂ ಹೋರಾಡಲಿದೆ. ಇದು ಮಾತುಕತೆಯ ಮೊದಲ ಹೆಜ್ಜೆಯಾಗಬಹುದು ಎಂದು ಹೇಳಿದರು.

ಇದಕ್ಕೂ ಮೊದಲು ರಷ್ಯಾದೊಂದಿಗೆ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಿ ಯುದ್ಧವನ್ನು ನಿಲ್ಲಿಸುವ ಬಗ್ಗೆ ಚರ್ಚಿಸಲು ಝೆಲೆನ್ಸ್ಕಿ ಮುಂದಾಗಿದ್ದರು. ಆದರೆ ರಷ್ಯಾ ಅಧ್ಯಕ್ಷ ಇದಾವುದಕ್ಕೂ ಬಗ್ಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಿಂದ ಉಕ್ರೇನ್ ಅಧ್ಯಕ್ಷ ನೇರ ಮಾತುಕತೆ ನಡೆಸಲು ಸಿದ್ದರಿದ್ದಾರೆ ಎಂದಿದ್ದಾರೆ.

ಕಳೆದ ವಾರ ಝೆಲೆನ್ಸ್ಕಿ ರಾಜತಾಂತ್ರಿಕತೆ ಇಲ್ಲದೇ ಯುದ್ಧವನ್ನು ನಿಲ್ಲಿಸುವುದು ಅಸಾಧ್ಯ ಎಂದು ತಿಳಿಸಿದ್ದರು. ಉಕ್ರೇನ್ನ 2ನೇ ಮುಖ್ಯ ನಗರವಾದ ಖಾರ್ಕೀವ್ ನಲ್ಲಿ ನಮ್ಮ ಪಡೆ ರಷ್ಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದೆ. ಆದರೆ ಡಾನ್ಬಾಸ್ ನಗರದಲ್ಲಿ ರಕ್ತಸಿಕ್ತ ಪರಿಸ್ಥಿತಿ ಉಂಟಾಗಿದೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

2 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

3 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

3 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

4 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

4 hours ago