Categories: ವಿದೇಶ

ಮಹಿಂದಾ ರಾಜಪಕ್ಸನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಲು ಗೋಟಬಯ ರಾಜಪಕ್ಸ ಒಪ್ಪಿಗೆ

ಶ್ರೀಲಂಕಾ: ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನಲ್ಲಿಸಿಲುಕಿರುವ ಶ್ರೀಲಂಕಾ ಆರ್ಥಿಕ ದಿವಾಳಿತನದಿಂದ ಹೊರಬರಲು ಪರಿಹಾರೋಪಾಯಗಳನ್ನು ಹುಡುಕುತ್ತಿದೆ. ಈ ನಡುವೆ, ತಮ್ಮ ಸಹೋದರ ಮಹಿಂದಾ ರಾಜಪಕ್ಸ ಅವರನ್ನು ಶ್ರೀಲಂಕಾ ಪ್ರಧಾನಿ ಹುದ್ದೆಯಿಂದ ವಜಾಗೊಳಿಸಲು ಅಧ್ಯಕ್ಷ ಗೋಟಬಯ ರಾಜಪಕ್ಸ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದೇಶದಲ್ಲಿನ ಹದಗೆಟ್ಟ ಆರ್ಥಿಕ ಪರಿಸ್ಥಿತಿ ವಿಚಾರವಾಗಿ ಕ್ರೋಧಗೊಂಡಿರುವ ಶ್ರೀಸಾಮಾನ್ಯರು, ನೂರಾರು ವ್ಯಾಪಾರಿ ಸಂಘಟನೆಗಳು ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶ್ರೀಲಂಕಾ ಅಧ್ಯಕ್ಷ ಗೋಟಬಯ ತಕ್ಷಣವೇ ರಾಜೀನಾಮೆ ನೀಡುವಂತೆ ಆಗ್ರಹಗಳು ಕೇಳಿಬರುತ್ತಿವೆ.

ದೇಶದಲ್ಲಿ ಅಗತ್ಯವಸ್ತುಗಳು, ಆಹಾರ ಪದಾರ್ಥಗಳು, ಔಷಧಗಳ ದೇಶದಲ್ಲಿ ಗಗನ ಮುಟ್ಟಿದೆ. ದೇಶವನ್ನು ದಿವಾಳಿಯಂಚಿಗೆ ತಳ್ಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ರಾಜಪಕ್ಸ ಕುಟುಂಬ ರಾಜಕೀಯದ ವಿರುದ್ಧ ಜನರು ಬೀದಿಗಳಿದು ಪ್ರತಿಭಟಿಸುತ್ತಿದ್ದಾರೆ.

ಈ ಮಧ್ಯೆ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲು ರಾಷ್ಟ್ರೀಯ ಮಂಡಳಿಯನ್ನು ನೇಮಿಸಲಾಗುವುದು, ಎಲ್ಲಾ ಪಕ್ಷಗಳನ್ನು ಒಳಗೊಂಡಿರುವ ಕ್ಯಾಬಿನೆಟ್ ನ್ನು ಸಂಸತ್ತಿನಲ್ಲಿ ರಚಿಸಲಾಗುವುದು, ಈ ಪ್ರಕ್ರಿಯೆಗೆ ಅಧ್ಯಕ್ಷ ಗೋಟಬಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ಮೈತ್ರಿಪಾಲ ಸಿರಿಸೇನಾ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.

Sneha Gowda

Recent Posts

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

4 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

4 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

19 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

25 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

38 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

56 mins ago