ಕಾಬೂಲ್: ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದ ತಾಲಿಬಾನ್ ನಿಧಾನವಾಗಿ ತನ್ನ ಸಿದ್ದಾಂತವನ್ನು ಆಫ್ಘನ್ ನಾಗರೀಕರ ಮೇಲೆ ಹೇರುತ್ತಿದೆ.
ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ರಷ್ಯಾ ಮೂಲದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ನ್ಯೂಸ್ ಏಜೆನ್ಸಿ ವರದಿ ಮಾಡಿದ್ದು, ‘ನಾಲ್ವರು ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯದೊಳಕ್ಕೆ ಪ್ರವೇಶಿಸಲು ಅನುಮತಿ ನೀಡಿಲ್ಲ. ತಾಲಿಬಾನ್ ನಿರ್ಧಾರದ ವಿರುದ್ಧ ಮಹಿಳೆಯರು ಸಚಿವಾಲಯದ ಸಮೀಪ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.