Categories: ವಿದೇಶ

ಮುಂದಿನ ವಾರದ ಯುದ್ಧ ನಿರ್ಣಾಯಕ ಮತ್ತು ಕಠಿಣವಾಗಿರಲಿದೆ : ಝೆಲೆನ್ಸ್ಕಿ

ಎಲ್ವಿವ್ :ಮುಂದಿನ ವಾರದ ಯುದ್ಧ ನಿರ್ಣಾಯಕ ಮತ್ತು ಮತ್ತಷ್ಟು ಕಠಿಣವಾಗಿರಲಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್ ಪ್ರಜೆಗಳು ಮತ್ತು ಸೇನೆಯನ್ನು ಉದ್ದೇಶಿಸಿ ಮಾತನಾಡಿರುವ ಪೂರ್ವದಲ್ಲಿ ಬಿಡಾರ ಹೂಡಿರುವ ರಷ್ಯಾದ ಪಡೆಗಳು ಇನ್ನೂ ದೊಡ್ಡ ಪ್ರಮಾಣದ ಕಾರ್ಯಾಚರಣೆಗೆ ಇಳಿಯಲಿವೆ.

ಯುದ್ಧ ಅಪರಾಧಗಳ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.ಜನರು ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು, ಕ್ಷಮೆಯಾಚಿಸಲು, ವಾಸ್ತವಕ್ಕೆ ಹೊಂದಿಕೊಳ್ಳಲು ಮತ್ತು ಕಲಿಯಲು ಧೈರ್ಯವಿಲ್ಲದಿದ್ದಾಗ ರಾಕ್ಷಸರಾಗುತ್ತಾರೆ. ಜಗತ್ತು ಅದನ್ನು ನಿರ್ಲಕ್ಷಿಸಿದಾಗ ರಾಕ್ಷಸರು ತಮಗೆ ಜಗತ್ತು ಹೊಂದಿಕೊಳ್ಳಬೇಕು ಎಂದು ಬಯಸುತ್ತಾರೆ.

ತಪ್ಪು ಮಾಡುತ್ತಿರುವ ರಷ್ಯಾ ಅಧ್ಯಕ್ಷರು ಎಲ್ಲವನ್ನೂ ಒಪ್ಪಿಕೊಳ್ಳಬೇಕಾದ ದಿನ ಬರುತ್ತದೆ, ಸತ್ಯವನ್ನು ಒಪ್ಪಿಕೊಳ್ಳಲೇ ಬೇಕಾಗುತ್ತದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್‍ಗೆ ಹೆಚ್ಚಿನ ನೆರವು ನೀಡುವಂತೆ ಜರ್ಮನಿ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಮತ್ತೊಮ್ಮೆ ಕರೆ ನೀಡಿದ ಝೆಲೆನ್ಸ್ಕಿ, ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗಿನ ಮಾತುಕತೆಯ ಸಮಯದಲ್ಲಿ ರಷ್ಯಾ ವಿರುದ್ಧ ನಿರ್ಬಂಧಗಳನ್ನು ಮತ್ತಷ್ಟು ಬಲಪಡಿಸುವುದು ಮತ್ತು ಯುದ್ಧ ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸುವ ರೀತಿಯ ಬಗ್ಗೆ ಚರ್ಚಿಸಿರುವುದಾಗಿ ಝೆಲೆನ್ಸ್ಕಿ ಹೇಳಿದ್ದಾರೆ.

ಜರ್ಮನ್ ಇತ್ತೀಚೆಗೆ ಉಕ್ರೇನ್ ಪರವಾಗಿ ಬದಲಾಗಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತಿದೆ. ನಾನು ಅದನ್ನು ಸಂಪೂರ್ಣವಾಗಿ ತಾರ್ಕಿಕವೆಂದು ಪರಿಗಣಿಸುತ್ತೇನೆ ಎಂದಿದ್ದಾರೆ.

Swathi MG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

7 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

7 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

7 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

7 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

8 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

8 hours ago