News Karnataka Kannada
Monday, April 29 2024
ವಿದೇಶ

ಮೆಕ್ಸಿಕೋ: ಗುಂಡಿನ ದಾಳಿಗೆ 19 ಮಂದಿ ಬಲಿ

Gun
Photo Credit :

ಮೆಕ್ಸಿಕೋ ಸಿಟಿ : ಸೆಂಟ್ರಲ್ ಮೆಕ್ಸಿಕೋದಲ್ಲಿ ಭಾನುವಾರ 19 ಜನರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಟೇಟ್ ಅಟಾರ್ನಿ ಜನರಲ್ ಕಚೇರಿ(ಎಫ್‌ಜಿಇ) ಪ್ರಕಟಣೆಯಲ್ಲಿ ತಿಳಿಸಿದೆ.

ಮೈಕೋಕಾನ್ ರಾಜ್ಯದ ಲಾಸ್ ಟಿನಾಜಾಸ್ ಪಟ್ಟಣದಲ್ಲಿ ಹಬ್ಬದ ಸಭೆಯ ಮೇಲೆ ದಾಳಿಯ ವರದಿಗಳ ನಂತರ ರಾತ್ರಿ ಸುಮಾರು ೧೦.೩೦ಕ್ಕೆ ಈ ದುರ್ಘಟನೆ ನಡೆದಿದೆ.

’16 ಪುರುಷರು ಮತ್ತು ಮೂವರು ಮಹಿಳೆಯರು ಸೇರಿದಂತೆ 19 ದೇಹಗಳು ಪತ್ತೆಯಾಗಿದ್ದು, ಅವರ ದೇಹದ ಮೇಲೆ ಗುಂಡಿನ ಗಾಯಗಳು ಪತ್ತೆಯಾಗಿವೆ. ಇನ್ನೂ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

ಈ ಗುಂಡಿನ ದಾಳಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಮೆಕ್ಸಿಕೋದ ಅತ್ಯಂತ ಹಿಂಸಾತ್ಮಕ ರಾಜ್ಯಗಳಾದ ಮೈಕೋಕಾನ್ ಮತ್ತು ನೆರೆಯ ಗುವಾನುಜುಟೊವೊ ಮಾದಕವಸ್ತು ಕಳ್ಳಸಾಗಣೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಪ್ರತಿಸ್ಪರ್ಧಿ ಗ್ಯಾಂಗ್‌ಗಳ ನಡುವೆ ಈ ರೀತಿಯ ಜಗಳಗಳು ನಡೆಯುತ್ತವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು