Categories: ವಿದೇಶ

ರಷ್ಯಾದಲ್ಲಿ ಫೇಸ್‌ಬುಕ್‌, ಟ್ವಿಟರ್ ಮೇಲೆ ನಿಷೇಧ

ಮಾಸ್ಕೊ: ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ತಾರತಮ್ಯ ತೋರಿದೆ ಎಂದು ಆರೋಪಿಸಿರುವ ರಷ್ಯಾದ ಮಾಧ್ಯಮ ನಿಯಂತ್ರಕ  ಫೇಸ್‌ಬುಕ್ ಹಾಗೂ ಟ್ವಿಟರ್ ಮೇಲೆ ನಿಷೇಧ ಹೇರಿದೆ.ಇದರ ಜೊತೆಗೆ ಬಿಬಿಸಿ, ಆಯಪಲ್ ಹಾಗೂ ಗೂಗಲ್ ಆಯಪ್ ಸ್ಟೋರ್‌ಗಳ ಮೇಲೂ ನಿರ್ಬಂಧ ಹೇರಲಾಗಿದೆ.

ಆರ್‌ಟಿ ಮತ್ತು ಆರ್‌ಐಎ ನ್ಯೂಸ್ ಏಜೆನ್ಸಿ ಮೇಲಿನ ಇತ್ತೀಚಿನ ನಿರ್ಬಂಧಗಳು ಇದು ಒಳಗೊಂಡಿವೆ ಎಂದು ಹೇಳಿದೆ.

ಉಕ್ರೇನ್ ಸಂಘರ್ಷದ ವರದಿಗೆ ಸಂಬಂಧಿಸಿದಂತೆ ರಷ್ಯಾ ಮಾಧ್ಯಮಗಳ ಮೇಲೆ ಫೇಸ್‌ಬುಕ್ ಹಾಗೂ ಟ್ವಿಟರ್ ನಿರ್ಬಂಧವನ್ನು ಹೇರಿತ್ತು. ಈ ತಾರತಮ್ಯ ಧೋರಣೆಯನ್ನು ಖಂಡಿಸಿರುವ ರಷ್ಯಾ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

2020 ಅಕ್ಟೋಬರ್‌ನಿಂದ ರಷ್ಯಾದ ಮಾಧ್ಯಮಗಳ ಮೇಲೆ ನಿರ್ಬಂಧಕ್ಕೆ ಸಂಬಂಧಿಸಿದಂತೆ 26 ಪ್ರಕರಣ ಫೇಸ್‌ಬುಕ್ ದಾಖಲಿಸಿದೆ. ಈ ನಡುವೆ ಫೇಸ್‌ಬುಕ್ ಮೇಲಿನ ನಿರ್ಬಂಧ ತೆರವುಗೊಳಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ ಎಂದು ಮೆಟಾ ಅಧ್ಯಕ್ಷ ನಿಕ್ ಕ್ಲೆಗ್ ತಿಳಿಸಿದ್ದಾರೆ.ಇದಕ್ಕೆ ಸಮಾನವಾಗಿ ಟ್ವಿಟರ್ ಮೇಲೂ ರಷ್ಯಾ ನಿಷೇಧ ಹೇರಿದೆ.

ಏತನ್ಮಧ್ಯೆ ಉಕ್ರೇನ್ ಯುದ್ಧಕ್ಕೆ ಸಂಬಂಧಪಟ್ಟಂತೆ ನಕಲಿ ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶಿಸಿದ್ದಾರೆ. ಯುದ್ಧದ ಕುರಿತಾಗಿ ರಷ್ಯಾದ ವಿರುದ್ಧ ತಪ್ಪು ಮಾಹಿತಿ ನೀಡಿದವರಿಗೆ 15 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಾನೂನಿಗೆ ಸಹಿ ಹಾಕಿದ್ದಾರೆ.

Swathi MG

Recent Posts

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

4 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

21 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

32 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

46 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago