Categories: ವಿದೇಶ

ರಷ್ಯಾದಿಂದ ಭೀಕರ ರಾಕೆಟ್‌ ದಾಳಿ: 30 ಉಕ್ರೇನಿಯನ್ನರ ಸಾವು

ಕಳೆದ ಒಂದೂವರೆ ತಿಂಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ಕಾಳಗ ನಡೆಯುತ್ತಿದೆ. ಈಗಾಗಲೇ ಲೆಕ್ಕವಿಲ್ಲದಷ್ಟು ಸಾವು ನೋವುಗಳು ಸಂಭವಿಸಿದೆ. ಆದರೂ ಉಕ್ರೇನ್‌ ಮೇಲೆ ತನ್ನ ಹಿಡಿತವ್ನು ಸಾಧಿಸಲು ರಷ್ಯಾ ಪ್ರಯತ್ನಿಸುತ್ತಿದೆ.

ಈ ನಿಟ್ಟಿನಲ್ಲಿ ಇಂದೂ ಕೂಡ ಉಕ್ರೇನ್‌ ಮೇಲೆ ಬಾಂಬ್ ದಾಳಿ ಮಾಡಿದೆ. ಪೂರ್ವ ಉಕ್ರೇನ್ ಅನ್ನು ಗುರಿಯಾಗಿರಿಸಿಕೊಂಡು ರೈಲ್ವೆ ನಿಲ್ದಾಣದ ಮೇಲೆ ರಾಕೆಟ್ ದಾಳಿ ನಡೆಸಿದೆ. ನಿರಾಶ್ರಿತರನ್ನು ಸ್ಥಳಾಂತರಿಸುವ ರೈಲ್ವೆ ನಿಲ್ದಾಣದ ಮೇಲೆ ನಡೆಸಿದ ರಾಕೆಟ್ ದಾಳಿಯಲ್ಲಿ 30ಜನ ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪ್ರತಿಯಾಗಿ ಉಕ್ರೇನ್‌ ಕೂಡ ತನ್ನ ರಷ್ಯಾ ಹತ್ತಿಕ್ಕಲು ಸತತ ಪ್ರಯತ್ನ ನಡೆಸುತ್ತಿದೆ. ರಷ್ಯಾದ ಅನೇಕ ಸೈನಿಕರು ಯುದ್ಧದಲ್ಲಿ ಕೊಲ್ಲಲ್ಪಟ್ಟರು ಎಂದು ಉಕ್ರೇನಿಯನ್ ಸೇನೆ ಪದೇ ಪದೇ ಸ್ಪಷ್ಟಪಡಿಸುತ್ತಿದೆ. ಸೇನಾ ಕಾರ್ಯಾಚರಣೆ ಪ್ರಾರಂಭವಾದಾಗಿನಿಂದ 18,900 ರಷ್ಯಾದ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಉಕ್ರೇನಿಯನ್ ಸೇನೆಯು ಗುರುವಾರ ಘೋಷಣೆ ಮಾಡಿದೆ.

ಜೊತೆಗೆ, 698 ಯುದ್ಧ ಟ್ಯಾಂಕ್‌ಗಳು, 1891 ಶಸ್ತ್ರಸಜ್ಜಿತ ವಾಹನಗಳು, 150 ಯುದ್ಧವಿಮಾನಗಳು, 135 ಹೆಲಿಕಾಪ್ಟರ್‌ಗಳು ಮತ್ತು 111 ಯುಎವಿಗಳನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್‌ ಹೇಳಿದೆ. ಇಷ್ಟೇ ಅಲ್ಲದೆ 7 ಹಡಗುಗಳು, 55 ವಿಮಾನಗಳು ಮತ್ತು ಕ್ಷಿಪಣಿ ವಿಧ್ವಂಸಕಗಳನ್ನು ನಾಶಪಡಿಸಲಾಗಿದೆ ಎಂದು ಉಕ್ರೇನ್‌ ಸೇನ್‌ ಹೇಳಿದೆ

Sneha Gowda

Recent Posts

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

4 seconds ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

4 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

15 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

19 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

53 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago