Categories: ವಿದೇಶ

ರಷ್ಯಾ-ಉಕ್ರೇನ್‌ ಬಿಕ್ಕಟ್ಟಿನ ನಡುವೆ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಮಾಸ್ಕೋಗೆ ಭೇಟಿ

ಮಾಸ್ಕೋ : ರಷ್ಯಾ-ಉಕ್ರೇನ್‌ ಬಿಕ್ಕಟ್ಟಿನ ನಡುವೆಯೂ ದ್ವಿಪಕ್ಷೀಯ ಮಾತುಕತೆ ನಡೆಸಲು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಮಾಸ್ಕೋಗೆ ಆಗಮಿಸಿದ್ದಾರೆ.

ಆರ್ಥಿಕ ಮತ್ತು ವ್ಯಾಪಾರ ಸಹಕಾರ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲು ಎರಡು ದಿನಗಳ ರಷ್ಯಾ ಭೇಟಿಯನ್ನು ಇಮ್ರಾನ್‌ ಖಾನ್‌ ಕೈಗೊಂಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಇಮ್ರಾನ್‌ ಖಾನ್‌ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ರಷ್ಯಾದ ಕಂಪನಿಗಳ ಸಹಯೋಗದೊಂದಿಗೆ ಬಹುಕೋಟಿ ಡಾಲರ್ ವೆಚ್ಚದ ಗ್ಯಾಸ್ ಪೈಪ್‌ಲೈನ್ ನಿರ್ಮಿಸಲು ಇಮ್ರಾನ್‌ ಖಾನ್‌ ಪುಟಿನ್ ಅವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.

1999ರಲ್ಲಿ ಪಾಕಿಸ್ತಾನದ ಆಗಿನ ಪ್ರಧಾನಿ ನವಾಜ್‌ ಷರೀಫ್‌ ರಷ್ಯಾಗೆ ಭೇಟಿ ನೀಡಿದ್ದರು. ಅದಾದ ಬಳಿಕ ರಷ್ಯಾ ಭೇಟಿಗೆ ನೀಡುತ್ತಿರುವ ಮೊದಲ ಪ್ರಧಾನಿ ಇಮ್ರಾನ್‌ ಖಾನ್. ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಮತ್ತು ರಷ್ಯಾದ ಸಂಬಂಧ ಹಳಸಿತ್ತು. ಕಳೆದ ವರ್ಷ ರಷ್ಯಾದ ವಿದೇಶಾಂಗ ಸಚಿವ ಸರ್ಗೆ ಲಾವ್ರೊವ್‌ ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು.

ಪಾಶ್ಚಿಮಾತ್ಯ ದೇಶಗಳು ಮತ್ತು ವಿಶ್ವ ಸಮುದಾಯದ ಎಚ್ಚರಿಕೆಯನ್ನು ಧಿಕ್ಕರಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದಾರೆ. ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಉಕ್ರೇನ್ ಸೈನಿಕರಿಗೆ ಅವರು ಕರೆ ನೀಡಿದ್ದಾರೆ.

Gayathri SG

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

20 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

37 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

55 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

2 hours ago