News Karnataka Kannada
Monday, April 29 2024
ವಿದೇಶ

ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧ ಘೋಷಿಸಿದ ಅಮೆರಿಕ ಅಧ್ಯಕ್ಷ ಜೋ ಬಿಡೆನ್

Russia America
Photo Credit :

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧ ಘೋಷಿಸಿದ್ದಾರೆ. ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಕ್ರಮಣಕಾರಿ ವರ್ತನೆ ತೋರುತ್ತಿದ್ದಾರೆ ಎಂದು ಬಿಡೆನ್ ದೂರಿದ್ದು, ರಷ್ಯಾ ವಿರುದ್ಧ ಸರಣಿ ನಿರ್ಬಂಧಗಳನ್ನು ಘೋಷಿಸಿದ್ದಾರೆ.

ರಷ್ಯಾ ವಿರುದ್ಧ ಆರ್ಥಿಕ ನಿರ್ಬಂಧಗಳನ್ನು ಘೋಷಿಸಿದ ನಂತರ ಶ್ವೇತಭವನದಲ್ಲಿ ಜೋ ಬಿಡೆನ್ ಮಾತನಾಡಿದ್ದು, ರಷ್ಯಾ ಆಕ್ರಮಣಕಾರಿ ಎಂಬುದರಲ್ಲಿ ಅನುಮಾನ ಇಲ್ಲ. ಇದರಿಂದ ನಾವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಂಭೀರವಾಗಿ ಗಮನ ಹರಿಸಿದ್ದೇವೆ. ರಷ್ಯಾ ಆಕ್ರಮಣ ಹೆಚ್ಚಾದರೆ ನಿರ್ಬಂಧಗಳು ಹೆಚ್ಚಾಗಲಿದೆ ಎಂದು ಎಚ್ಚರಿಸಿದ್ದಾರೆ.

ರಷ್ಯಾದ ಕ್ರಮಗಳು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ ಮಾಡಿವೆ. ಅಮೆರಿಕದ ಮಿತ್ರರಾಷ್ಟ್ರಗಳು ಮತ್ತು ಪಾಲುದಾರ ದೇಶಗಳೊಂದಿಗೆ ನಿರ್ಬಂಧಗಳ ಬಗ್ಗೆ ಚರ್ಚೆಯಾಗಿದೆ. ರಷ್ಯಾ ಆಕ್ರಮಕಾರಿ ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದ ಪುಟಿನ್ ಮಾತನ್ನೂ ಬಿಡೆನ್ ವಿರೋಧಿಸಿದ್ದಾರೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ವಿಇಬಿ ಹಾಗೂ ಮಿಲಿಟರಿ ಬ್ಯಾಂಕ್ ಮೇಲೆ ಸಂಪೂರ್ಣ ನಿರ್ಬಂಧ ಹಾಗೂ ರಷ್ಯಾದ ಸರ್ಕಾರಕ್ಕೆ ಪಾಶ್ಚಿಮಾತ್ಯ ಹಣಕಾಸು ಸೌಲಭ್ಯವನ್ನು ಕಡಿತಗೊಳಿಸಿದ್ದೇವೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು