ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯದ ಸಾರಿಗೆ ವಿಮಾನವೊಂದನ್ನು ಉಕ್ರೇನ್ ಹೊಡೆದುರುಳಿಸಿದೆ.
ವಿಮಾನ ಐಎಲ್76ನ್ನು ಉಕ್ರೇನ್ ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೀವ್ ನಗರದ ವಾಲಿಸ್ಕಿವ್ ಪಟ್ಟಣದ ಬಳಿ ಘಟನೆ ನಡೆದಿದೆ.
ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಫೋಟದ ಶಬ್ದಗಳು ಮಿಲಿಟರಿ ನೆಲೆಯಿಂದ ಬರುತ್ತಿವೆ. ರಸ್ತೆ ಮಧ್ಯೆ ಬೆಂಕಿ ಹೊತ್ತಿ ಉರಿಯುತ್ತಿದೆ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.