Categories: ವಿದೇಶ

ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ ಪಾಕಿಸ್ತಾನದ ಅಧ್ಯಕ್ಷ ಆರಿಫ್!

ಇಸ್ಲಾಮಾಬಾದ್: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಪಾಕಿಸ್ತಾನದ ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ ಸುಮಾರು ಒಂದು ತಿಂಗಳ ನಂತರ, ಇಂದು ನಿರ್ಣಾಯಕ ಮತದಾನ ನಡೆಯಬೇಕಿತ್ತು. ಆದರೆ ನಿರ್ಣಯವನ್ನು ಸ್ಪೀಕರ್ ವಜಾಗೊಳಿಸಿದ್ದು, ಹೈಡ್ರಾಮಾವೇ ನಡೆಯಿತು.

ಇಮ್ರಾನ್ ಖಾನ್ ಕೆಳಗಿಳಿಸಿ ಹಂಗಾಮಿ ಸರಕಾರ ರಚನೆಗೆ ಸಿದ್ಧತೆ ಆರಂಭವಾಯಿತು. ಅವಿಶ್ವಾಸ ಮತಕ್ಕೆ ಅವಕಾಶ ನೀಡದ ಡೆಪ್ಯುಟಿ ಸ್ಪೀಕರ್ ತೀರ್ಪಿನಿಂದ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯ ಸ್ಥಗಿತಗೊಂಡಿದೆ. ಇಮ್ರಾನ್ ಖಾನ್ ಸದ್ಯಕ್ಕೆ ಪಾಕ್ ಪ್ರಧಾನಿಯಾಗಿ ಉಳಿದರು.

ಈ ವೇಳೆ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವಂತೆ ನಾನು ಅಧ್ಯಕ್ಷರಿಗೆ ಸಲಹೆ ನೀಡುತ್ತೇನೆ. ಚುನಾವಣೆಗೆ ಸಿದ್ಧರಾಗಿ ಎಂದು ಪ್ರತಿಪಕ್ಷಗಳಿಗೆ ಇಮ್ರಾನ್ ಖಾನ್ ಹೇಳಿದರು.

ಬಳಿಕ ಇಮ್ರಾನ್ ಖಾನ್ ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಅವರನ್ನು ಭೇಟಿ ಮಾಡಿ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದರು. ಇಮ್ರಾನ್ ಖಾನ್ ಅವರ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದರು ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

Sneha Gowda

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

4 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago