ಲಿಬಿಯಾದ ಜೈಲುಗಳಲ್ಲಿ12 ಸಾವಿರ ಮಂದಿಯನ್ನು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.
ಲಿಬಿಯಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ, ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ. ಜೊತೆಗೆ ಲಿಬಿಯಾದ 27 ಜೈಲುಗಳಲ್ಲಿ 12 ಸಾವಿರಕ್ಕೂ ಹೆಚ್ಚು ಮಂದಿಯನ್ನು ಅಕ್ರಮವಾಗಿ ಬಂಧಿಸಿ ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಮಾಹಿತಿ ನೀಡಿದ್ದಾರೆ.
ಲಿಬಿಯಾದ ಸಶಸ್ತ್ರ ಪಡೆಗಳು ನಿರಾಶ್ರಿತರು, ವಲಸಿಗರ ಮೇಲೆ ಈಗಾಗಲೇ ಸಾಕಷ್ಟು ನಿರ್ಬಂಧ ಹೇರಿದ್ದಾರೆ. ದೌರ್ಜನ್ಯ, ಹಿಂಸೆ, ಮಾನಸಿಕ ತೊಂದರೆ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಆಗುತ್ತಿದೆ ಎಂದಿದ್ದಾರೆ.
ಲಿಬಿಯಾದ ಮಹಿಳೆಯರ ಸ್ಥಿತಿ ಬಗ್ಗೆ ಹೇಳುವುದು ಅಸಾಧ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಕೆಲ ಅಧಿಕಾರಿಗಳು ಮಾನವ ಕಳ್ಳಸಾಗಣೆ, ಅತ್ಯಾಚಾರಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.