News Karnataka Kannada
Friday, May 10 2024
ವಿದೇಶ

ವಾಷಿಂಗ್ಟನ್‌: ಒಂದೇ ದಿನ ದಾಖಲೆಯ 5 ಲಕ್ಷಕ್ಕೂ ಅಧಿಕ ಕೊವೀಡ್ ಪ್ರಕರಣಗಳು ಪತ್ತೆ

Covid Corona
Photo Credit :

ವಾಷಿಂಗ್ಟನ್‌: ಜಗತ್ತಿನಲ್ಲೇ ಕೊರೊನಾ ಸಾಂಕ್ರಾಮಿಕದಿಂದಾಗಿ ಹಾನಿಗೊಳಗಾದ ದೇಶಗಳಲ್ಲಿ ಅಮೆರಿಕಾ ಮುಂಚೂಣಿಯಲ್ಲಿದೆ.ಬೂಸ್ಟರ್ ಡೋಸ್‌ ನಿಂದಲೂ ಜನರು ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಈ ವರ್ಷದ ಜನವರಿ 8 ರಂದು ಒಂದೇ ದಿನ 2,94,015 ಪ್ರಕರಣಗಳು ಕಂಡುಬಂದಿದ್ದವು. ಆ ದಾಖಲೆಯನ್ನು ನೂತನ ಏಕದಿನ ಪ್ರಕರನಗಳ ಸಂಖ್ಯೆ ಅಳಿಸಿಹಾಕಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 5,12,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5.4 ಕೋಟಿ ತಲುಪಿದೆ.

ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯ ನೀಡಿದ ಅಂಕಿ ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,762 ಅಮೆರಿಕನ್ನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಒಮಿಕ್ರಾನ್ ರೂಪಾಂತರಿ ದೇಶದ ಪರಿಸ್ಥಿತಿ ಹದಗೆಡುತ್ತಿರುವುದಕ್ಕೆ ಕಾರಣ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕಾ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಶನ್ (ಸಿಡಿಸಿ) ಪ್ರಕಾರ, ದೇಶದಲ್ಲಿ ಒಮಿಕ್ರಾನ್ ಶೇ 58.6ರಷ್ಟಿದೆ ಎಂದು ಅಂದಾಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು