Categories: ವಿದೇಶ

ವಿದ್ಯಾರ್ಥಿಗಳಿಂದ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡು ಬೆಂಕಿಯಲ್ಲಿ ಸುಟ್ಟ ಶಿಕ್ಷಕರು

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡ ಶಿಕ್ಷಕರು ಬೆಂಕಿಯಲ್ಲಿ ಸುಟ್ಟು ಹಾಕಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.

ವಿದ್ಯಾರ್ಥಿಗಳಿಂದ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡ ಶಿಕ್ಷಕರು, ನಂತರ ಬೆಂಕಿಯ ಬ್ಯಾರೆಲ್‌ಗೆ ಫೋನ್ ಗಳನ್ನು ಎಸೆದಿದ್ದಾರೆ. ಘಟನೆಯ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಶಿಕ್ಷಕರ ವರ್ತನೆಗೆ ನೆಟ್ಟಿಗರು ಕೆಂಡಕಾರಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಮೊಬೈಲ್ ಫೋನ್ ಕೊಂಡೊಯ್ಯುವುದರ ಬಗ್ಗೆ ಬಹಳ ಹಿಂದಿನಿಂದಲೂ ಚರ್ಚಾಸ್ಪದ ವಿಷಯವಾಗಿದೆ. ಆದರೀಗ ಸಾಂಕ್ರಾಮಿಕ ರೋಗ ಹಾಗೂ ಆನ್ಲೈನ್ ಶಿಕ್ಷಣ ಕಲಿಕೆಯಿಂದಾಗಿ, ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಅನಿವಾರ್ಯವಾಗಿವೆ. ಹಾಗಾಗಿಯೇ ಈ ಕಠಿಣ ಶಿಕ್ಷೆ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ವಿದ್ಯಾರ್ಥಿಗಳು ಭಯಭೀತರಾಗಿ ದೂರದಿಂದ ನೋಡುತ್ತಿದ್ದರೆ, ಶಿಕ್ಷಕರೊಬ್ಬರು ಬೆಂಕಿಯ ಬ್ಯಾರೆಲ್‌ಗೆ ಸ್ಮಾರ್ಟ್‌ಫೋನ್‌ಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ. ಹಲವಾರು ವಿದ್ಯಾರ್ಥಿಗಳು ಹಾಗೆ ಮಾಡದಂತೆ ಬೇಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಇದೇ ವೇಳೆ ಮತ್ತೊಬ್ಬ ಶಿಕ್ಷಕಿ ಕೂಡ ಬ್ಯಾರೆಲ್‌ಗೆ ಐಫೋನ್ ಎಸೆದಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಫೋನ್ ತಂದಿದ್ದು ತಪ್ಪಾದರೂ ಕೂಡ, ಶಿಕ್ಷಕರು ಈ ರೀತಿಯಾಗಿ ನಾಶಪಡಿಸಬಾರದಿತ್ತು. ಕೆಲವು ದಿನಗಳ ಬಳಿಕ ಹಿಂದಿರುಗಿಸಬೇಕಾಗಿತ್ತು ಅಂತಾ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

Gayathri SG

Recent Posts

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

2 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

2 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

26 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

29 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

48 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

1 hour ago