Categories: ವಿದೇಶ

ವಿಶ್ವಸಂಸ್ಥೆ ಮಾನವೀಯ ನೆರವು ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್‌ಗೆ ಕೊರೋನ ದೃಢ

ನ್ಯೂಯಾರ್ಕ್‌ : ವಿಶ್ವಸಂಸ್ಥೆಯ (ಯುಎನ್) ಮಾನವೀಯ ನೆರವು ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್‌ ಅವರಿಗೆ ಕೋವಿಡ್‌-19 ದೃಢಪಟ್ಟಿದೆ.

‘ನನಗೆ ಕೋವಿಡ್ ದೃಢಪಟ್ಟಿದೆ ಎಂದು ತಿಳಿಸಲು ಬೇಸರವಾಗುತ್ತಿದೆ. ಪ್ರಯಾಣವನ್ನು ರದ್ದುಪಡಿಸಿ, ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿ ಉಳಿದಿದ್ದೇನೆ.

ಆರೋಗ್ಯ ಮಾರ್ಗಸೂಚಿಯನ್ನು ಅನುಸರಿಸುತ್ತಿದ್ದೇನೆ’ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಹಾಗೆಯೇ, ಈಗಾಗಲೇ ಕೋವಿಡ್‌ ತಡೆ ಲಸಿಕೆ ಪಡೆದುಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌-ರಷ್ಯಾ ಯುದ್ಧ ಪರಿಸ್ಥಿತಿ ಕುರಿತಂತೆ ಟರ್ಕಿಯಲ್ಲಿ ಈ ವಾರಾಂತ್ಯದಲ್ಲಿ ಸಭೆಗಳು ನಿಗದಿಯಾಗಿವೆ. ಇದರ ಸಲುವಾಗಿ ಟರ್ಕಿ ಪ್ರವಾಸ ಕೈಗೊಳ್ಳುವುದಾಗಿ ಸೋಮವಾರವಷ್ಟೇ ಗ್ರಿಫಿತ್ಸ್‌ ಪ್ರಕಟಿಸಿದ್ದರು.

ಮಾಸ್ಕೋ ಮತ್ತು ಕೀವ್‌ ಜೊತೆಗೆ ಇತ್ತೀಚೆಗೆ ನಡೆಸಿದ ಸಭೆಗಳ ಸಂದರ್ಭದಲ್ಲಿ, ನಿರ್ದಿಷ್ಟ ಮಾನವೀಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಸೇರಲು ಒಪ್ಪುವಂತೆ ಎರಡೂ ದೇಶಗಳನ್ನು ಒತ್ತಾಯಿಸಿದ್ದರು. ಹಾಗೆಯೇ, ಉಕ್ರೇನ್‌ ಪರಿಸ್ಥಿತಿ ಕುರಿತು ಟರ್ಕಿಯಲ್ಲಿ ಚರ್ಚಿಸಿದ ಬಳಿಕ, ಮತ್ತೊಂದು ಸುತ್ತಿನ ಮಾತುಕತೆಗಾಗಿ ಮಾಸ್ಕೋಗೆ ಭೇಟಿ ನೀಡುವ ಇಂಗಿತವನ್ನೂ ವ್ಯಕ್ತಪಡಿಸಿದ್ದರು.

Gayathri SG

Recent Posts

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

7 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

19 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

55 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

1 hour ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

9 hours ago