Categories: ವಿದೇಶ

ಶ್ರೀಲಂಕಾದಲ್ಲಿ ಭುಗಿಲೆದ್ದ ಆಹಾರ ಬಿಕ್ಕಟ್ಟು

ಕೊಲಂಬೊ : ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ.

ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರ ಅಭದ್ರತೆ ತೋರಿರುವುದರಿಂದ ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ದಾಸ್ತಾನಿನ ವಿರುದ್ಧ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಹಿತಿ ನೀಡಿದ್ದಾರೆ.

ಇದೇ ಸಂಬಂಧ ಅಕ್ಕಿ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಪ್ರಕ್ರಿಯೆ ನಿರ್ವಹಣೆಗಾಗಿ ಉನ್ನತ ಸೇನಾಧಿಕಾರಿಯನ್ನು ರಾಜಪಕ್ಸ ಅವರು ನೇಮಕ ಮಾಡಿದ್ದಾರೆ.

ಶ್ರೀಲಂಕಾದಲ್ಲಿ ಅಕ್ಕಿ, ಆಲೂಗಡ್ಡೆ ಸೇರಿದಂತೆ ಹಲವು ದಿನಸಿ ಸಾಮಗ್ರಿ ಬೆಲೆ ಗಗನಕ್ಕೇರುತ್ತಲೇ ಇದೆ. ಅಲ್ಲದೆ ಹಾಲಿನ ಪುಡಿ, ಸೀಮೆ ಎಣ್ಣೆ, ಅಡುಗೆ ಅನಿಲ ಖರೀದಿಗೆ ಗ್ರಾಹಕರು ಅಂಗಡಿ ಮುಂದೆ ಸರದಿ ನಿಲ್ಲುತ್ತಿದ್ದಾರೆ.

2020ರಲ್ಲಿ ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿತ್ತು. ಅಲ್ಲದೆ ವಿದೇಶಿ ವಿನಿಮಯ ಉಳಿಸುವ ಉದ್ದೇಶದಿಂದ ಹಲವು ಅಗತ್ಯ ವಸ್ತುಗಳ ಆಮದಿನ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇವೆಲ್ಲದರಿಂದಾಗಿ ಆಹಾರ ಅಭದ್ರತೆ ತಲೆದೋರಿದೆ ಎಂದು ತಜ್ನರು ಅಭಿಪ್ರಾಯಪಟ್ಟಿದ್ದಾರೆ.

ಇಂಧನ ಸಚಿವ ಉದಯ ಗಮನ್ ಪಿಲ ಅವರು ಇಂಧನವನ್ನು ಎಚ್ಚರಿಕೆಯಿಂದ ಬಳಸುವಂತೆ ನಾಗರಿಕರಿಗೆ ಮನವಿ ಮಾಡಿದ್ದರು ಎನ್ನುವುದು ಗಮನಾರ್ಹ. ಇಂಧನ ಬಳಕೆ ಕಡಿಮೆಯಾಗದಿದ್ದಲ್ಲಿ ಈ ವರ್ಷಾಂತ್ಯ ಶ್ರೀಲಂಕಾ ಸರ್ಕಾರ ಇಂಧನ ಖರಿದೀಗೆ ರೇಷನ್ ವ್ಯವಸ್ಥೆ ಜಾರಿಗೆ ತರಲಿದೆ ಎನ್ನಲಾಗುತ್ತಿದೆ.

Raksha Deshpande

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago