ಇಂಡೋನೇಷ್ಯಾದಲ್ಲಿ ಸುಮೇರು ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 98 ಜನ ಗಾಯಗೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆ, ದೇಶದ ಪಶ್ಚಿಮ ದ್ವೀಪದಲ್ಲಿನ ಅತಿ ಎತ್ತರದ ಪರ್ವತ ಸುಮೇರುನಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ. ಇದರ ಪರಿಣಾಮ ಮಲಾಂಗ್ ನಗರ, ಲುಮಾಜಾಂಗ್ ಸೇರಿದಂತೆ 11 ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ ಎಂದರು.
ಸ್ಫೋಟದ ತೀವ್ರತೆಗೆ ಇಬ್ಬರು ಗರ್ಭಿಣಿಯರು ಸೇರಿದಂತೆ 98 ಮಂದಿ ಗಾಯಗೊಂಡಿದ್ದಾರೆ. 902 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.