ಸ್ಪೇನ್: ಸ್ಪೇನ್ನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 1,61,688 ಹೊಸ ಪ್ರಕರಣಗಳು ವರದಿಯಾಗಿವೆ.ಕೋವಿಡ್ ಸಾಂಕ್ರಾಮಿಕ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಸ್ಪೇನ್ನಲ್ಲಿ ಒಂದೇ ದಿನದಲ್ಲಿ ಇಷ್ಟು ಪ್ರಕರಣಗಳು ವರದಿಯಾಗಿವೆ ಎಂದೂ ಮಾಹಿತಿ ನೀಡಿದೆ.
ಇದೇ ವೇಳೆ 74 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.
ಈ ದೇಶದಲ್ಲಿ ಇದುವರೆಗೆ ಒಟ್ಟು 62,94,745 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಪೈಕಿ 89,405 ಮಂದಿ ಮೃತಪಟ್ಟಿದ್ದಾರೆ.
ಪ್ರಪಂಚದ ಹಲವು ದೇಶಗಳಂತೆ ಸ್ಪೇನ್ನಲ್ಲಿಯೂ ಇದೀಗ ಓಮೈಕ್ರಾನ್ ಪ್ರಕರಣಗಳು ವರದಿಯಾಗುತ್ತಿದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.