ವಾಷಿಂಗ್ಟನ್: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ತೀವ್ರವಾಗಿದೆ. ಈ ನಡುವೆ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ 29 ಮಂದಿ ಅಮೆರಿಕ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ತಿಳಿಸಿದೆ.
ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ಈ ಮಾಹಿತಿಯನ್ನು ನೀಡಿದ್ದಾರೆ. ಇದಕ್ಕೂ ಮುನ್ನ ಹಮಾಸ್ ದಾಳಿಯಲ್ಲಿ 27 ಮಂದಿ ಮೃತಪಟ್ಟಿರುವುದು ದೃಢಪಟ್ಟಿತ್ತು. ಇನ್ನೂ 15 ಮಂದಿ ನಾಗರಿಕರು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶನಿವಾರದಂದು US ಸರ್ಕಾರವು ಗಾಜಾದಲ್ಲಿರುವ ತನ್ನ ನಾಗರಿಕರಿಗೆ ದಕ್ಷಿಣಕ್ಕೆ ರಫಾ ಗಡಿ ದಾಟಲು ಸಲಹೆ ನೀಡಿತು.