ಅಥೆನ್ಸ್: ಮಧ್ಯ ಗ್ರೀಸ್ ನಲ್ಲಿ ಎರಡು ರೈಲುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾಗಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಲಾರಿಸ್ಸಾ ನಗರದ ಬಳಿಯ ಟೆಂಪಿಯಲ್ಲಿ ಮಂಗಳವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಗ್ರೀಕ್ ಅಗ್ನಿಶಾಮಕ ಸೇವೆಯನ್ನು ಉಲ್ಲೇಖಿಸಿ ಮಾಧ್ಯಮಗಳು ಮಾಡಿದೆ.
ಅಥೆನ್ಸ್ ನಿಂದ 350 ಜನರನ್ನು ಹೊತ್ತೊಯ್ಯುತ್ತಿದ್ದ ಉತ್ತರದ ನಗರ ಥೆಸಲೊನಿಕಿ ಕಡೆಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ನಡುವಿನ ಡಿಕ್ಕಿಯ ಕಾರಣವನ್ನು ತನಿಖೆ ಮಾಡಲಾಗುತ್ತಿದೆ.
ಬಲವಾದ ಡಿಕ್ಕಿಯ ನಂತರ ಅನೇಕ ಬೋಗಿಗಳು ಹಳಿ ತಪ್ಪಿವೆ ಮತ್ತು ಕನಿಷ್ಠ ಮೂರು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ರಾಷ್ಟ್ರೀಯ ಪ್ರಸಾರಕ ಇಆರ್ಟಿ ತನ್ನ ವರದಿಯಲ್ಲಿ ತಿಳಿಸಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಗ್ರೀಕ್ ಅಗ್ನಿಶಾಮಕ ಸೇವೆ ತಿಳಿಸಿದೆ.