ಇಸ್ಲಾಮಾಬಾದ್: ಪಾಕಿಸ್ತಾನದ ಕೆಲವು ಭಾಗಗಳಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಕಂಪನದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿದ್ದು, ಬೆಳಿಗ್ಗೆ 10.50 ಕ್ಕೆ ಕಂಪನ ಸಂಭವಿಸಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.
ಖೈಬರ್ ಪಖ್ತುಂಖ್ವಾದ ಮಲಕಾಂಡ್ ಮತ್ತು ಹಜಾರಾ ವಿಭಾಗ, ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಕಂಪನದ ಅನುಭವವಾಗಿದೆ ಎಂದು ಡಾನ್ ವರದಿ ಮಾಡಿದೆ. ಪ್ರಾಂತ್ಯದ ವಿವಿಧ ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಆದರೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಖೈಬರ್ ಪಖ್ತುಂಖ್ವಾ ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.