ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಮಿ ಕಂಪಿಸಿದೆ, ಕಳೆದ ವಾರವಷ್ಟೇ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿತ್ತು. ಇದೀಗ ಇಂದು ಬೆಳಗಿನ ಜಾವ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಣಹಾನಿ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಭೂಕಂಪವು ಹೆರಾತ್ ಪ್ರಾಂತ್ಯದ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.