ಅಮೆರಿಕ: ಚಿಕಾಗೋದಲ್ಲಿ ಎರಡು ಮನೆಗಳಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಚಿಕಾಗೋ ನಗರದಿಂದ ದೂರದಲ್ಲಿರುವ ಉಪನಗರಗಳಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯ ಉದ್ದೇಶ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಕೊಲೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ಇನ್ನೂ ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಶೂಟರ್ಗೆ ಮೃತರ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದು ಪೊಲೀಸರು ಹೇಳಿದ್ದಾರೆ. ಸ್ಥಳೀಯ ಪೊಲೀಸರು ಎಫ್ಬಿಐ ಕಾರ್ಯಪಡೆಯ ನೆರವಿನೊಂದಿಗೆ ಆರೋಪಿಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಭಾನುವಾರ ಮತ್ತು ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಚಿಕಾಗೋ ಪೊಲೀಸರು ತಿಳಿಸಿದ್ದಾರೆ.