Categories: ವಿದೇಶ

ಮದುವೆ ಊಟದಲ್ಲಿ ಟೊಪ್ಪಿ ಉದುರಿಸಿದ್ದಕ್ಕೆ ಮಾರಾಮಾರಿ

ಇಸ್ಲಾಮಾಬಾದ್:‌ ಮದುವೆ ಮನೆಗಳಲ್ಲಿ ಊಟದ ಮೆನು, ಟೇಸ್ಟ್‌ ವಿಚಾರಕ್ಕೆ ಗಲಾಟೆ, ಗೊಂದಲಗಳಾಗುವುದು ಸಹಜ. ಇದೇ ಕಾರಣಕ್ಕೆ ಕೆಲ ವಿವಾಹಗಳೇ ಮುರಿದುಬಿದ್ದ ಹಲವು ಉದಾಹರಣೆಗಳಿವೆ. ಆದರೆ ಪಾಕಿಸ್ತಾನದಲ್ಲಿ ಮದುವೆ ಸಮಾರಂಭದ ಊಟದ ವೇಳೆ ವ್ಯಕ್ತಿಯೊಬ್ಬ ಅತಿಥಿಯೊಬ್ಬನ ಟೊಪ್ಪಿಯನ್ನು ಉದುರಿಸಿದ ಪರಿಣಾಮ ಮಾರಾಮಾರಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಆರು ನಿಮಿಷಗಳ ಕಾಲದ ಈ ವಿಡಿಯೋದಲ್ಲಿ, ಮದುವೆ ಆಗಮಿಸಿದ್ದ ಜನರು ತಮ್ಮ, ತಮ್ಮ ಟೇಬಲ್‌ ಗಳಲ್ಲಿ ಕುಳಿತು ಊಟ ಮಾಡುತ್ತಿದ್ದರು. ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ಊಟದ ವ್ಯವಸ್ಥೆಆಗಿ ಬಿಳಿ ಬಟ್ಟೆಯಿಂದ ಪರದೆ ಕಟ್ಟಲಾಗಿತ್ತು. ಈ ಸಂದರ್ಭದಲ್ಲಿ ಊಟದ ಟೇಬಲ್‌ ಬಳಿ ಬಂದ ವ್ಯಕ್ತಿಯೊಬ್ಬ ಅತಿಥಿಯೊಬ್ಬರ ಟೊಪ್ಪಿಯನ್ನು ಏಕಾಏಕಿ ಉದುರಿಸಿಬಿಟ್ಟಿದ್ದ. ಆ ವೇಳೆ ಹೊಡೆದಾಟ ಆರಂಭವಾಗಿ ರಣಾಂಗಣವಾಗಿ ಮಾರ್ಪಟ್ಟಿರುವುದು ಸೆರೆಯಾಗಿದೆ.

ಮುಖ-ಮೂತಿ ನೋಡದೇ ಕುರ್ಚಿಯಿಂದ ಹೊಡೆದಾಡಿಕೊಳ್ಳುತ್ತಾ. ಇಡೀ ಊಟದ ಹಾಲ್‌ ತುಂಬಾ ಗದ್ದಲ, ಬಡಿದಾಟದಲ್ಲಿ ನಿರತರಾಗಿದ್ದರು. ಈ ವೇಳೆ ಮಹಿಳೆಯರು ಹೊಡೆದಾಟ ನಿಲ್ಲಿಸಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿದೆ.

Ashika S

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

6 seconds ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

8 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

25 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

31 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

50 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

54 mins ago