News Karnataka Kannada
Friday, May 17 2024
ವಿದೇಶ

ಅಫ್ಗನ್‌ ಭೂಕಂಪ: ಸಾವಿನ ಸಂಖ್ಯೆ 4 ಸಾವಿರಕ್ಕೇರಿಕೆ

Afghanistan earthquake: Death toll rises to 4,000
Photo Credit : News Kannada

ಕಾಬೂಲ್‌: ತಾಲಿಬಾನ್‌ ಆಡಳಿತದಲ್ಲಿರುವ ಅಫ್ಗನ್‌ ನಲ್ಲಿ ಅ.7ರಂದು ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 4 ಸಾವಿರ ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6.2 ತೀವ್ರತೆಯ ಎರಡು ಭೂಕಂಪಗಳಲ್ಲಿ ಸುಮಾರು 2,000 ಮನೆಗಳು ನೆಲಸಮವಾಗಿದೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ ಸಾವು -ನೋವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ ಎಂದು ಎಎನ್​​​ಡಿಎಮ್​​​ಎ ಹೇಳಿದೆ.

ಸೋಮವಾರ ನೀಡಿದ ವರದಿಗಳ ಪ್ರಕಾರ 2,400 ಜನ ಸಾವನ್ನಪ್ಪಿದರು ಎಂದು ಹೇಳಲಾಗಿತ್ತು. ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ವರದಿ ಹೇಳಿತ್ತು. ಇನ್ನು ANDMA ಹೇಳಿರುವ ಪ್ರಕಾರ ದಿನದಿಂದ ದಿನಕ್ಕೆ ಭೂಕಂಪದಿಂದ ಸಾವನ್ನಪ್ಪಿರುವವ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು