ಮಂಡ್ಯ: ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸಕ್ಕರೆ ನಾಡಿಗೆ ಭೇಟಿ ನೀಡಲಿದ್ದಾರೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಮಂಡ್ಯ ತಾ| ಹಲ್ಲೇಗೆರೆ ಗ್ರಾಮದಲ್ಲಿ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣವಾಗುತ್ತಿದ್ದು, ಇದರ ಶಂಕುಸ್ಥಾಪನೆಗೆ ಬರಾಕ್ ಒಬಾಮಾ ಆಗಮಿಸಲಿದ್ದಾರೆ.
ಅದು ಈಗಲ್ಲ, ಮುಂಬರುವ 2024ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಆಗಮಿಸಲಿದ್ದಾರೆ. ಮಂಡ್ಯದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭೂದೇವಿ ಆಧ್ಯಾತ್ಮಿಕ ಕೇಂದ್ರ ಶಂಕುಸ್ಥಾಪನೆಗೆ ಒಬಾಮಾ ಅವರು ದಂಪತಿ ಸಮೇತರಾಗಿ ಆಗಮಿಸಲಿದ್ದಾರೆ.
ಇನ್ನು ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಜಗತ್ತಿನಲ್ಲಿ ಮೊಟ್ಟ ಮೊದಲನೆಯದಾಗಿ ನಿರ್ಮಾಣ ಮಾಡಲಾಗುತ್ತಿರುವ ಸರ್ವಧರ್ಮ ಸಮನ್ವಯ ಕೇಂದ್ರವೆಂದೂ (ಮದರ್ ಅರ್ಥ್) ಕರೆಯಬಹುದು.