News Karnataka Kannada
Monday, May 06 2024
ವಿದೇಶ

ಅಂಕಾರ: ರೆಸ್ಟೋರೆಂಟ್ ನಲ್ಲಿ ಸಿಲಿಂಡರ್ ಸ್ಫೋಟ, 7 ಸಾವು

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.
Photo Credit : Pixabay

ಅಂಕಾರ: ಟರ್ಕಿಯ ಪಶ್ಚಿಮ ಪ್ರಾಂತ್ಯದ ಐದಿನ್ ನಲ್ಲಿರುವ ರೆಸ್ಟೋರೆಂಟ್ ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಗವರ್ನರ್ ತಿಳಿಸಿದ್ದಾರೆ.

ಐದಿನ್ ನ ನಾಜಿಲ್ಲಿ ಜಿಲ್ಲೆಯ ರೆಸ್ಟೋರೆಂಟ್ ನಲ್ಲಿ ಖಾಲಿ ಗ್ಯಾಸ್ ಸಿಲಿಂಡರ್ ಅನ್ನು ಸಿಬ್ಬಂದಿ ಬದಲಾಯಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಆರಂಭಿಕ ಸಂಶೋಧನೆಗಳು ತೋರಿಸುತ್ತವೆ ಎಂದು ಗವರ್ನರ್ ಹುಸೈನ್ ಅಕ್ಸೋಯ್  ಸುದ್ದಿಗಾರರಿಗೆ ತಿಳಿಸಿದರು.

ಸ್ಫೋಟದ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ನ್ಯಾಯಾಂಗ ಸಚಿವ ಬೆಕಿರ್ ಬೊಜ್ಡಾಗ್ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ಮಾಧ್ಯಮಗಳು ವರದಿ ಮಾಡಿದೆ. ಅಗ್ನಿಶಾಮಕ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸರನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು