Categories: ವಿದೇಶ

ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಆಕಸ್ಮಿಕ: 26 ಮಂದಿ ಸಾವು

ಬೀಜಿಂಗ್: ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿ ಕಂಪನಿಯ ಕಟ್ಟಡದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ.

ನ್ಯಾಷನಲ್ ಮೈನ್ ಸೇಫ್ಟಿ ಅಡ್ಮಿನಿಸ್ಟ್ರೇಷನ್ ಪ್ರಕಾರ, ಲ್ಯುಲಿಯಾಂಗ್ ನಗರದ ಲಿಶಿ ಜಿಲ್ಲೆಯಲ್ಲಿರುವ ಐದು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

60ಕ್ಕೂ ಹೆಚ್ಚು ಜನರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಕಟ್ಟಡವು ಖಾಸಗಿ ಯೋಂಗ್ಜು ಕಲ್ಲಿದ್ದಲು ಗಣಿ ಕಂಪನಿಗೆ ಸೇರಿದ್ದು, ವರ್ಷಕ್ಕೆ 120 ಟನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಶಾಂಕ್ಸಿ ಪ್ರಾಂತ್ಯವು ಚೀನಾದ ಕಲ್ಲಿದ್ದಲಿನ ಅತಿದೊಡ್ಡ ಉತ್ಪಾದಕ ಕೇಂದ್ರವಾಗಿದ್ದು, ಹಲವು ಖಾಸಗಿ ಗಣಿ ಕಂಪನಿಗಳು ಇಲ್ಲಿವೆ.

ಕಳೆದ ಏಪ್ರಿಲ್‌ನಲ್ಲಿ, ಬೀಜಿಂಗ್‌ನ ರಾಜಧಾನಿಯಲ್ಲಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು 29 ಜನರು ಸಾವನ್ನಪ್ಪಿದರು. ಕಳೆದ ಅಕ್ಟೋಬರ್‌ನಲ್ಲಿ ವಾಯುವ್ಯ ಯಿಂಚುವಾನ್ ಪ್ರಾಂತ್ಯದ ಬಾರ್ಬೆಕ್ಯೂ ರೆಸ್ಟೋರೆಂಟ್‌ನಲ್ಲಿ ಸ್ಫೋಟ ಸಂಭವಿಸಿ 31 ಜನರು ಸಾವನ್ನಪ್ಪಿದ್ದರು.

Ashika S

Recent Posts

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

1 min ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

8 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

13 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

32 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

33 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

54 mins ago