News Karnataka Kannada
Saturday, May 04 2024
ವಿದೇಶ

ರಷ್ಯಾದಲ್ಲಿ ಪೆಟ್ರೋಲ್‌ ಪಂಪ್‌ ಸ್ಫೋಟ 35 ಮಂದಿ ಸಾವು

At least 35 killed in Russia petrol pump explosion
Photo Credit : News Kannada

ಮಾಸ್ಕೊ: ದಕ್ಷಿಣ ರಷ್ಯಾದ ಪೆಟ್ರೋಲ್ ಬಂಕ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಸೋಮವಾರದಂದು ಕ್ಯಾಸ್ಪಿಯನ್ ಸಮುದ್ರದ ಕರಾವಳಿಯಲ್ಲಿರುವ ಡಾಗೆಸ್ತಾನ್ ಪ್ರಾದೇಶಿಕ ರಾಜಧಾನಿ ಮಖಚ್ಕಲಾದಲ್ಲಿ ಸ್ಫೋಟ ಸಂಭವಿಸಿದೆ. ರಾತ್ರಿ ವೇಳೆ ಆಕಾಶದೆತ್ತರಕ್ಕೆ ಬೆಂಕಿ ಜ್ವಾಲೆ ಹರಡಿರುವ ಚಿತ್ರಗಳು ಜಾಲತಾಣದಲ್ಲಿ ಹರಿದಾಡಿವೆ.

ಪೆಟ್ರೋಲ್ ಬಂಕ್ ಬಳಿಯ ಕಾರು ದುರಸ್ತಿ ಕೇಂದ್ರದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಘಟನೆ ಬಗ್ಗೆ ರಷ್ಯಾ ಅಧ್ಯಕ್ಷ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದು, ಡಾಗೆಸ್ತಾನ್‌ನ ಕುಮ್ಟೋರ್ಕಾಲಿನ್ಸ್ಕಿ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಪ್ರಾದೇಶಿಕ ಮುಖ್ಯಸ್ಥ ಸೆರ್ಗೆಯ್ ಮೆಲಿಕೋವ್ ತಿಳಿಸಿದ್ದಾರೆ.

ಗಾಯಗೊಂಡವರ ರಕ್ಷಣೆಗೆ 260 ಕಾರ್ಮಿಕರನ್ನು ನಿಯೋಜಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಮಾಸ್ಕೋಗೆ ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು