News Karnataka Kannada
Tuesday, April 30 2024
ವಿದೇಶ

ಅಥೆನ್ಸ್: ರೈಲುಗಳ ನಡುವೆ ಡಿಕ್ಕಿ, ಸಾವಿನ ಸಂಖ್ಯೆ 38ಕ್ಕೆ ಏರಿಕೆ

Uttar Pradesh: Three killed as truck rams into dhaba
Photo Credit : Pixabay

ಅಥೆನ್ಸ್: ಮೂರು ದಿನಗಳ ಹಿಂದೆ ಮಧ್ಯ ಗ್ರೀಸ್‌ನಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಾವನ್ನಪ್ಪಿದವರ ಸಂಖ್ಯೆ 38 ಕ್ಕೆ ಏರಿದೆ, 57 ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗ್ರೀಕ್ ಅಗ್ನಿಶಾಮಕ ಸೇವೆ ತಿಳಿಸಿದೆ. ಆರು ಜನರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.

ಲಾರಿಸ್ಸಾ ನಗರದ ಬಳಿ ಇನ್ನೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಗ್ರೀಕ್ ಅಗ್ನಿಶಾಮಕ ಸೇವೆಯ ವಕ್ತಾರ ವಾಸಿಲಿಯೊಸ್ ವತ್ರಕೋಗಿಯಾನಿಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗ್ರೀಸ್‌ನ ಅತ್ಯಂತ ಭೀಕರ ರೈಲು ಅಪಘಾತದಲ್ಲಿ ಬಲಿಯಾದವರಲ್ಲಿ ಹೆಚ್ಚಿನವರು ಯುವಕರು ಎಂದು ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಬುಧವಾರ ಸಂಜೆ ರಾಷ್ಟ್ರವನ್ನು ಉದ್ದೇಶಿಸಿ ದೂರದರ್ಶನ ಭಾಷಣದಲ್ಲಿ ಹೇಳಿದರು. ಅಪಘಾತದ ಕಾರಣಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ತಜ್ಞರ ಸ್ವತಂತ್ರ ಸಮಿತಿ ಸ್ಥಾಪಿಸಲಾಗುವುದು. ಇಬ್ಬರು ರಾಷ್ಟ್ರೀಯ ರೈಲ್ವೆ ಅಧಿಕಾರಿಗಳು ರಾಜೀನಾಮೆ ನೀಡಿದ್ದಾರೆ ಎಂದು ಮಿತ್ಸೋಟಾಕಿಸ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು