ಬ್ಯಾಂಕಾಕ್: ಥಾಯ್ಲೆಂಡ್ ನ ಚೋನ್ಬುರಿ ಪ್ರಾಂತ್ಯದ ನೈಟ್ ಕ್ಲಬ್ ನಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬ್ಯಾಂಕಾಕ್ ಪೋಸ್ಟ್ ವರದಿ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಪ್ರಸ್ತುತ ಬೆಂಕಿ ಅವಘಡಕ್ಕೆ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.