News Karnataka Kannada
Monday, May 06 2024
ವಿದೇಶ

ಅಮೆರಿಕಾದ ವಾಷಿಂಗ್‌ಟನ್‌ ಡಿಸಿಯಲ್ಲಿ ಗುಂಡಿನ ದಾಳಿ, ಬಾಲಕ ಸಾವು

Gunmen kill 21 civilians
Photo Credit : Wikimedia

ವಾಷಿಂಗ್‌ಟನ್‌: ಅಮೆರಿಕಾದಲ್ಲಿ ಮ್ಯೂಸಿಕ್ ಕಾನ್ಸರ್ಟ್ ನಡೆಯುತ್ತಿದ್ದ ಜಾಗದ ಬಳಿ ಶೂಟಿಂಗ್ ನಡೆದಿದೆ. ಗುಂಡಿನ ದಾಳಿಯಲ್ಲಿ 15ವರ್ಷದ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾಷಿಂಗ್‌ಟನ್‌ನ ಯು ಸ್ಟ್ರೀಟ್, ನಾರ್ತ್‌ವೆಸ್ಟ್ 14 ಮತ್ತು ಯು ಸ್ಟ್ರೀಟ್‌ನ 1400 ಬ್ಲಾಕ್‌ನಲ್ಲಿ ಜೂನ್ 19ರ ರಾತ್ರಿ ಘಟನೆ ನಡೆದಿದೆ.

ಗುಂಡಿನ ದಾಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆಯ ಕುರಿತು ಮಾತನಾಡಿದ ಡಿಸಿ ಪೊಲೀಸ್ ಮುಖ್ಯಸ್ಥ ರಾಬರ್ಟ್ ಕಾಂಟಿ ಕಾನ್ಸರ್ಟ್‌ ನಡೆಸಲು ನಗರದೊಳಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕೇ ಬೇಡವೇ ಎಂಬುದರ ಕುರಿತು ಅಟಾರ್ನಿ ಜನರಲ್ ಜತೆ ಚರ್ಚಿಸುವುದಾಗಿ ತಿಳಿಸಿದರು.

ಘಟನಾ ಸ್ಥಳದಲ್ಲಿದ್ದ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 2 ಗಂಟೆಗಳ ಅವಧಿಯಲ್ಲಿ ಈ ದುರಂತ ಸಂಭವಿಸಿದೆ ಎಂದು ರಾಬರ್ಟ್ ಕಾಂಟಿ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು