News Karnataka Kannada
Monday, May 06 2024
ವಿದೇಶ

ಕ್ಯಾನ್‌ಬೆರಾ: ಕೋವಿಡ್‌ ಪೂರ್ವ ಮಟ್ಟಕ್ಕೆ ಮರಳಿದ ಸಾರ್ವಜನಿಕ ಸಾರಿಗೆ ಸಂಚಾರ

Canberra: Public transport traffic to pre-Covid levels
Photo Credit : IANS

ಕ್ಯಾನ್‌ಬೆರಾ: ಆಸ್ಟ್ರೇಲಿಯಾದ ರಾಜಧಾನಿಯಲ್ಲಿ ಸಾರ್ವಜನಿಕ ಸಾರಿಗೆ ಬಳಕೆಯು ಸಾಂಕ್ರಾಮಿಕ ಪೂರ್ವದ ಮಟ್ಟಕ್ಕೆ ಮರಳಿದೆ. ಆಸ್ಟ್ರೇಲಿಯನ್ ಕ್ಯಾಪಿಟಲ್ ಟೆರಿಟರಿ ಸರ್ಕಾರವು ಭಾನುವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಫೆಬ್ರವರಿಯಲ್ಲಿ ಕ್ಯಾನ್‌ಬೆರಾ ಮತ್ತು ಸುತ್ತಮುತ್ತಲಿನ ಉಪನಗರಗಳಲ್ಲಿ 1.2 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡಿದ್ದಾರೆ.

ಕಳೆದ ತಿಂಗಳು ವಾರಾಂತ್ಯದಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ದಿನಕ್ಕೆ ಸರಾಸರಿ 18,177 ಪ್ರಯಾಣಗಳು ನಡೆದಿವೆ. ಕೋವಿಡ್‌ನಿಂದಾಗಿ ಸಮೂಹ ಸಾರಿಗೆಯಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆಯಾಗಿದೆ ಆದರೆ ಸರ್ಕಾರ ಸಾರ್ವಜನಿಕ ಸಾರಿಗೆ ಉತ್ತೇಜನಕ್ಕೆ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಕ್ರಿಸ್ ಸ್ಟೀಲ್ ಹೇಳಿದ್ದಾರೆ.

“ಸಾಂಕ್ರಾಮಿಕ ರೋಗದಿಂದ ಜಗತ್ತಿನಲ್ಲಿ ಸಮೂಹ ಸಾರಿಗೆ ಬಳಕೆ ಕಡಿಮೆಯಾಗಿದೆ ಆದರೆ ದೇಶದಲ್ಲಿ ಇದೀಗ ಸಾರ್ವಜನಿಕ ಸಾರಿಗೆಗೆ ಜನ ಮರಳುತ್ತಿರುವುದನ್ನು ನೋಡಲು ಸಂತಸವಾಗುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು