News Karnataka Kannada
Friday, May 17 2024
ವಿದೇಶ

ಅಫ್ಘಾನಿಸ್ತಾನದ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,400ಕ್ಕೆ ಏರಿಕೆ

Death toll in Afghanistan earthquake rises to 2,400
Photo Credit : IANS

ಅಫ್ಘಾನಿಸ್ತಾನ: ಸಂಭವಿಸಿದ ಸರಣಿ ಭೂಕಂಪಗಳಿಂದ ಸಾವನ್ನಪ್ಪಿದ್ದವರ ಸಂಖ್ಯೆ ಸೋಮವಾರ 2,400ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಸಚಿವಾಲಯದ ವಕ್ತಾರ ಜನನ್ ಸೈಕ್ ತಿಳಿಸಿದ್ದಾರೆ.

ಹೆರಾತ್‌ನ ಜಿಂದಾ ಜನ್ ಜಿಲ್ಲೆಯ 13 ಹಳ್ಳಿಗಳಲ್ಲಿ ವಾಸಿಸುತ್ತಿದ್ದವರು ಹೆಚ್ಚಿನ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ. 1,320 ಮನೆಗಳು ನಾಶವಾಗಿವೆ ಎಂದು ಹೇಳಿದರು. 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಶನಿವಾರದಂದು ಪಶ್ಚಿಮ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದರ ನಂತರ, 6.3, 5.9 ಮತ್ತು 5.5 ರ ತೀವ್ರತೆಯ ಮೂರು ಭೂಕಂಪಗಳು ಸಹ ಸಂಭವಿಸಿತ್ತು.

ಇನ್ನು ಅವಶೇಷಗಳಡಿ ನೂರಾರು ಜನರು ಸಿಲುಕಿ ಹಾಕಿಕೊಂಡಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ. ಎರಡು ದಶಕಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಅತಿ ಭೀಕರ ಭೂಕಂಪ ಇದಾಗಿದೆ ಎಂದು ತಾಲಿಬಾನ್ ಆಡಳಿತ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು