ವಿದೇಶ

ಅಮೆರಿಕ: ಡೊನಾಲ್ಡ್ ಟ್ರಂಪ್ ಅವರ ವಿಚ್ಛೇದಿತ ಪತ್ನಿ ಇವಾನಾ ಟ್ರಂಪ್ ವಿಧಿವಶ

ಅಮೆರಿಕ:  ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಚ್ಛೇದಿತ ಪತ್ನಿ, ಉದ್ಯಮಿ  73ವರ್ಷದ ಇವಾನಾ ಟ್ರಂಪ್ ವಿಧಿವಶರಾಗಿದ್ದಾರೆ.

ಉದ್ಯಮಿಯಾಗಿದ್ದ ಇವಾನಾ ನ್ಯೂಯಾರ್ಕ್‌ನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಇನ್ನೊಂದು ಮೂಲಗಳ‌ ಮಾಹಿತಿ ಪ್ರಕಾರ ತಮ್ಮ ನಿವಾಸದಲ್ಲಿ ಅವರು ಮೆಟ್ಟಿನಿಂದ ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಡೊನಾಲ್ಡ್ ಜೂನಿಯರ್, ಇವಾಂಕಾ, ಎರಿಕ್ ಎಂಬ ಮೂವರು ಮಕ್ಕಳನ್ನು ಬಿಟ್ಟು ಇವಾನಾ ಅಗಲಿದ್ದಾರೆ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರಂಪ್, ಇವಾನಾ ಅವರು ಉತ್ತಮ ಮತ್ತು ಸ್ಪೂರ್ತಿದಾಯಕ ಜೀವನವನ್ನು ನಡೆಸಿದರು‌ ಎಂದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪುತ್ರಿ ಇವಾಂಕಾ ನನ್ನ ತಾಯಿಯ ಅಗಲಿಕೆಯಿಂದ ನನಗೆ ಹೃದಯಾಘಾತವಾದಂತಾಗಿದೆ. ನಾನು ಅವಳನ್ನು ಶಾಶ್ವತವಾಗಿ ಕಳೆದುಕೊಂಡಿದ್ದೇನೆ ಆದರೆ, ಅವಳ ನೆನಪು ನಮ್ಮ ಹೃದಯದಲ್ಲಿ ಯಾವಾಗಲೂ ಜೀವಂತವಾಗಿರುತ್ತದೆ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

Sneha Gowda

Recent Posts

ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

5 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

15 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

33 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

43 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

56 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

10 hours ago